ಸಿಡ್ನಿ[ಜ.12]: ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ದುಕೊಂಡಿದ್ದು, 20 ಓವರ್ ಮುಕ್ತಾಯದ ವೇಳೆಗೆ 2 ವಿಕೆಟ್ ಕಳೆದುಕೊಂಡು 91 ರನ್ ಬಾರಿಸಿದೆ.

ಮೊದಲು ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾಗೆ ಮೂರನೇ ಓವರ್’ನಲ್ಲೇ ಭುವನೇಶ್ವರ್ ಕುಮಾರ್ ಶಾಕ್ ನೀಡುವಲ್ಲಿ ಯಶಸ್ವಿಯಾದರು. ಫಿಂಚ್ 6 ರನ್ ಬಾರಿಸಿ ಕ್ಲೀನ್ ಬೌಲ್ಡ್ ಆದರು. ಆ ಬಳಿಕ ಅಲೆಕ್ಸ್ ಕೋರಿ-ಉಸ್ಮಾನ್ ಖ್ವಾಜಾ ತಂಡಕ್ಕೆ 33 ರನ್’ಗಳ ಜತೆಯಾಟವಾಡುವ ಮೂಲಕ ಆಸರೆಯಾದರು. ನೆಲಕಚ್ಚಿ ಆಡುವ ಪ್ರಯತ್ನ ಮಾಡುತ್ತಿದ್ದ ಅಲೆಕ್ಸ್ ಅವರನ್ನು ಕುಲ್ದೀಪ್ ಬಲಿ ಪಡೆಯುವಲ್ಲಿ ಯಶಸ್ವಿಯಾದರು. 31 ಎಸೆತಗಳಲ್ಲಿ 5 ಬೌಂಡರಿ ಸಹಿತ 24 ರನ್ ಬಾರಿಸಿದ್ದ ಅಲೆಕ್ಸ್, ರೋಹಿತ್ ಶರ್ಮಾಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು.

ಇದೀಗ ಖ್ವಾಜಾ 31 ಹಾಗೂ ಶಾನ್ ಮಾರ್ಷ್ 24 ರನ್ ಬಾರಿಸಿ ಬ್ಯಾಟಿಂಗ್ ನಡೆಸುತ್ತಿದ್ದಾರೆ. ರವೀಂದ್ರ ಜಡೇಜಾ, ಎಂ.ಎಸ್ ಧೋನಿ, ದಿನೇಶ್ ಕಾರ್ತಿಕ್, ಅಂಬಟಿ ರಾಯುಡು ಭಾರತ ತಂಡ ಕೂಡಿಕೊಂಡಿದ್ದಾರೆ.