ಬಹುನಿರೀಕ್ಷಿತ 8ನೇ ಆವೃತ್ತಿಯ ಕರ್ನಾಟಕ ಪ್ರೀಮಿಯರ್ ಲೀಗ್ ಟೂರ್ನಿಗೆ ಇನ್ನೊಂದು ವಾರ ಬಾಕಿ ಇರುವಾಗಲೇ ಹುಬ್ಬಳ್ಳಿಯಲ್ಲಿ ನಡೆಯಬೇಕಿದ್ದ ಪಂದ್ಯಗಳು ತಾಂತ್ರಿಕ ಕಾರಣಗಳಿಂದ ಬೆಂಗಳೂರು ಹಾಗೂ ಮೈಸೂರಿಗೆ ಸ್ಥಳಾಂತರಗೊಂಡಿವೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ....

ಬೆಂಗಳೂರು(ಆ.08): ಉತ್ತರ ಕರ್ನಾಟಕ ಭಾಗದಲ್ಲಿ ಹವಾಮಾನ ವೈಪರಿತ್ಯದಿಂದಾಗಿ ಆಗಸ್ಟ್‌ 21 ರಿಂದ 25 ರವರೆಗೆ ಹುಬ್ಬಳ್ಳಿಯಲ್ಲಿ ನಡೆಯಬೇಕಿದ್ದ ಕೆಪಿಎಲ್‌ 8ನೇ ಆವೃತ್ತಿಯ ಪಂದ್ಯಗಳನ್ನು ಬೆಂಗಳೂರು ಹಾಗೂ ಮೈಸೂರಿಗೆ ಸ್ಥಳಾಂತರಿಸಲು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ನಿರ್ಧರಿಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

KPL 2019: ಇಲ್ಲಿದೆ ಆಟಗಾರರ ಹರಾಜಿನ ಸಂಪೂರ್ಣ ಲಿಸ್ಟ್ !

ಆಗಸ್ಟ್ 16ರಿಂದ ಕೆಪಿಎಲ್ ಟೂರ್ನಿ ಆರಂಭವಾಗಲಿದ್ದು, ಈ ಮೊದಲಿನ ವೇಳಾಪಟ್ಟಿ ಬೆಂಗಳೂರಿನಲ್ಲೇ ಉದ್ಘಾಟನಾ ಪಂದ್ಯ ನಡೆಯಲಿದೆ. ಫೈನಲ್ ಪಂದ್ಯಕ್ಕೆ ಮೈಸೂರು ಆತಿಥ್ಯ ವಹಿಸಲಿದೆ. ಕಳೆದ ವರ್ಷವೂ ಕೂಡ KPL ಪಂದ್ಯಗಳು ಹುಬ್ಬಳ್ಳಿಯಿಂದ ಮೈಸೂರಿಗೆ ಸ್ಥಳಾಂತರಗೊಂಡಿದ್ದವು. 

ಹಿಂದಿನ ವೇಳಾಪಟ್ಟಿ:

ಪರಿಷ್ಕೃತ ವೇಳಾಪಟ್ಟಿಯನ್ನು ಶೀಘ್ರ ಪ್ರಕಟ ಮಾಡುವುದಾಗಿ ಕೆಎಸ್‌ಸಿಎ ವಕ್ತಾರ ವಿನಯ್‌ ಮೃತ್ಯುಂಜಯ ತಿಳಿಸಿದ್ದಾರೆ. ಹೊಸ ವೇಳಾಪಟ್ಟಿ ತಿಳಿಯಲು ಕ್ರಿಕೆಟ್ ಅಭಿಮಾನಿಗಳೀಗ ತುದಿಗಾಲಿನಲ್ಲಿ ನಿಂತಿದ್ದಾರೆ.