ಈ ಶುಭ ಸಂದರ್ಭದಲ್ಲಿ ಟೀಂ ಇಂಡಿಯಾ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್, ವಿರೇಂದ್ರ ಸೆಹ್ವಾಗ್, ಯುವರಾಜ್ ಸಿಂಗ್, ರೈನಾ, ಆಸೀಸ್ ಮಾಜಿ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ಉತ್ತರಪ್ರದೇಶ ಮೂಲಕ ಕೈಫ್'ಗೆ ಜನ್ಮದಿನದ ಶುಭ ಕೋರಿದ್ದಾರೆ.
ಬೆಂಗಳೂರು(ಡಿ.01): ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಇಂದು 37ನೇ ವಸಂತಕ್ಕೆ ಕಾಲಿರಿಸಿದ್ದಾರೆ.
ಭಾರತ ಕ್ರಿಕೆಟ್ ಕಂಡ ಶ್ರೇಷ್ಠ ಕ್ಷೇತ್ರರಕ್ಷಕರ ಪಟ್ಟಿಯಲ್ಲಿ ಅಗ್ರಪಂಕ್ತಿಯಲ್ಲಿ ಗುರುತಿಸಿಕೊಳ್ಳುವ ಮೊಹಮ್ಮದ್ ಕೈಫ್ 2002ರ ನಾಟ್'ವೆಸ್ಟ್ ಸೀರಿಸ್ ಫೈನಲ್'ನಲ್ಲಿ ಭಾರತ ರೋಚಕ ಗೆಲುವು ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಯುವರಾಜ್ ಸಿಂಗ್ ಜೊತೆ ಆಫ್ ಸೈಡ್'ನಲ್ಲಿ ಅದ್ಭುತ ಕ್ಷೇತ್ರ ರಕ್ಷಣೆ ಮಾಡುತ್ತಿದ್ದ ಕೈಫ್ ಸಾಕಷ್ಟು ಸ್ಮರಣೀಯ ಕ್ಯಾಚ್'ಗಳನ್ನು ಹಿಡಿಯುವ ಮೂಲಕ ಕ್ರಿಕೆಟ್ ಅಭಿಮಾನಿಗಳ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿದ್ದಾರೆ.
ಈ ಶುಭ ಸಂದರ್ಭದಲ್ಲಿ ಟೀಂ ಇಂಡಿಯಾ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್, ವಿರೇಂದ್ರ ಸೆಹ್ವಾಗ್, ಯುವರಾಜ್ ಸಿಂಗ್, ರೈನಾ, ಆಸೀಸ್ ಮಾಜಿ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ಉತ್ತರಪ್ರದೇಶ ಮೂಲಕ ಕೈಫ್'ಗೆ ಜನ್ಮದಿನದ ಶುಭ ಕೋರಿದ್ದಾರೆ.
ಅದರಲ್ಲೂ ಹೇಡನ್ ಕ್ರಿಕೆಟ್ ಆಡುವ ಆ ದಿನಗಳನ್ನು ನೆನಪಿಸಿಕೊಂಡಿದ್ದು ಹೀಗೆ...