ಮೆಲ್ಬರ್ನ್[ಡಿ.27]: ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಆಕರ್ಷಕ ಶತಕ ಹಾಗೂ ನಾಯಕ ವಿರಾಟ್ ಕೊಹ್ಲಿಯ ಭರ್ಜರಿ ಅರ್ಧಶತಕದ ನೆರವಿನಿಂದ ಟೀಂ ಇಂಡಿಯಾ ಚಹಾ ವಿರಾಮದ ವೇಳೆಗೆ 4 ವಿಕೆಟ್ ಕಳೆದುಕೊಂಡು 346 ರನ್ ಬಾರಿಸಿದ್ದು, ಆಸಿಸ್ ಮೇಲೆ ಭಾರತ ಬಿಗಿ ಹಿಡಿತ ಸಾಧಿಸಿದೆ.

ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಮೊದಲ ದಿನದಂತ್ಯಕ್ಕೆ 2 ವಿಕೆಟ್ ಕಳೆದುಕೊಂಡು 215 ರನ್ ಬಾರಿಸಿದ್ದ ಭಾರತ ಎರಡನೇ ದಿನವೂ ಉತ್ತಮ ಆರಂಭ ಪಡೆದಿದೆ.

ಚೇತೇಶ್ವರ್ ಪೂಜಾರ 17ನೇ ಟೆಸ್ಟ್ ಶತಕ ಸಿಡಿಸಿದರು. ಇನ್ನು ನಾಯಕ ವಿರಾಟ್ ಕೊಹ್ಲಿ 82 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇದೀಗ ಅಜಿಂಕ್ಯ ರಹಾನೆ 30 ಹಾಗೂ ರೋಹಿತ್ ಶರ್ಮಾ 13 ರನ್ ಬಾರಿಸಿ ಬ್ಯಾಟಿಂಗ್ ನಡೆಸುತ್ತಿದ್ದಾರೆ.