ಇತ್ತೀಚೆಗಷ್ಟೇ ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಕೆಲಕಾಲ ದೂರವಿದ್ದ ಮೆಸ್ಸಿ ಈ ಪಂದ್ಯದಲ್ಲಿ ಅಕ್ಷರಶಃ ಮಿಂಚಿದರು.

ಬಾರ್ಸಿಲೋನಾ(ಅ.20): ನಾಯಕ ಲಯೋನೆಲ್ ಮೆಸ್ಸಿಯ ಹ್ಯಾಟ್ರಿಕ್ ಗೋಲಿನ ನೆರವಿನಿಂದಾಗಿ ಬುಧವಾರ ರಾತ್ರಿ ನಡೆದ ಚಾಂಪಿಯನ್ಸ್ ಲೀಗ್ ಫುಟ್ಬಾಲ್ ಪಂದ್ಯಾವಳಿಯ ಲೀಗ್ ಪಂದ್ಯದಲ್ಲಿ ಬಾರ್ಸಿಲೋನಾ ತಂಡ, ಮ್ಯಾಂಚೆಸ್ಟರ್ ಸಿಟಿ ತಂಡವನ್ನು 4-1 ಗೋಲುಗಳ ಅಂತರದಲ್ಲಿ ಮಣಿಸಿತು.

ಇತ್ತೀಚೆಗಷ್ಟೇ ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಕೆಲಕಾಲ ದೂರವಿದ್ದ ಮೆಸ್ಸಿ ಈ ಪಂದ್ಯದಲ್ಲಿ ಅಕ್ಷರಶಃ ಮಿಂಚಿದರು.

ಪಂದ್ಯದ 17, 61, 69 ನಿಮಿಷಗಳಲ್ಲಿ ಗೋಲು ದಾಖಲಿಸಿದ ಅವರು, ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರೆ, ತಂಡದ ಮತ್ತೊಬ್ಬ ಸ್ಟಾರ್ ಆಟಗಾರ ನೇಮಾರ್ 89ನೇ ನಿಮಿಷದಲ್ಲಿ ಮತ್ತೊಂದು ಗೋಲು ದಾಖಲಿಸಿ ಬಾರ್ಸಿಲೋನಾ ತಂಡದ ಭರ್ಜರಿ ಜಯಕ್ಕೆ ನೆರವಾದರು.