‘ರಾಷ್ಟ್ರೀಯ ತರಬೇತಿ ಶಿಬಿರಗಳಿಗೆ ಆಯ್ಕೆಯಾಗುವ ಕ್ರೀಡಾಪಟುಗಳು ಬೆಂಗಳೂರಿನಲ್ಲಿರುವ ಈ ತರಬೇತಿ ಕೇಂದ್ರದಲ್ಲಿ ಉಚಿತವಾಗಿ ತರಬೇತಿ ಪಡೆಯಬಹುದಾಗಿದೆ.
ಬೆಂಗಳೂರು(ಸೆ.09): ಬೆಂಗಳೂರಿನಲ್ಲಿ ಉನ್ನತ ಕ್ರೀಡಾ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಅಭಿನವ್ ಬಿಂದ್ರಾ ಫೌಂಡೇಶನ್ ಟ್ರಸ್ಟ್'ನೊಂದಿಗೆ ಕೇಂದ್ರ ಕ್ರೀಡಾ ಸಚಿವಾಲಯ ಕೈ ಜೋಡಿಸಿದ್ದು, ಫೌಂಡೇಶನ್'ಗೆ ₹ 5 ಕೋಟಿ ಅನುದಾನ ನೀಡಿದೆ.
‘ಕ್ರೀಡಾ ಉಪಕರಣಗಳ ಖರೀದಿ, ಕ್ರೀಡಾಪಟುಗಳಿಗೆ ಅತ್ಯುತ್ತಮ ತರಬೇತಿ ನೀಡುವುದು, ಕ್ರೀಡಾ ವಿಜ್ಞಾನಕ್ಕೆ ಸಂಬಂಧಿಸಿದ ಕಾರ್ಯ ಚಟುವಟಿಕೆಗಳಿಗೆ ಕೇಂದ್ರ ನೀಡಿರುವ ಅನುದಾನವನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ’ ಎಂದು ಕೇಂದ್ರ ಕ್ರೀಡಾ ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
‘ರಾಷ್ಟ್ರೀಯ ತರಬೇತಿ ಶಿಬಿರಗಳಿಗೆ ಆಯ್ಕೆಯಾಗುವ ಕ್ರೀಡಾಪಟುಗಳು ಬೆಂಗಳೂರಿನಲ್ಲಿರುವ ಈ ತರಬೇತಿ ಕೇಂದ್ರದಲ್ಲಿ ಉಚಿತವಾಗಿ ತರಬೇತಿ ಪಡೆಯಬಹುದಾಗಿದೆ.
ಮುಂದಿನ 3 ಒಲಿಂಪಿಕ್ಸ್ ಅನ್ನು ಗುರಿಯಾಗಿರಿಸಿಕೊಂಡು ಕೇಂದ್ರ ಸರ್ಕಾರ ‘ಟಾರ್ಗೆಟ್ ಒಲಿಂಪಿಕ್ ಪೋಡಿಯಂ’(TOP) ಅನ್ನು ರೂಪುಗೊಳಿಸಿದ್ದು, ಇದರ ಭಾಗವಾಗಿ ಬಿಂದ್ರಾ ಫೌಂಡೇಶನ್'ಗೆ ಅನುದಾನ ನೀಡಿದೆ.
