ಹಾಲಿ ನಡೆಯುತ್ತಿರುವ ಆ್ಯಷಸ್ ಸರಣಿಯಲ್ಲಿ ಚೊಚ್ಚಲ ಶತಕ ಸಿಡಿಸಿರುವ ಮಾರ್ಷ್, ಆಸ್ಟ್ರೇಲಿಯಾ ತಂಡಕ್ಕಾಗಿ ಆಡುವುದು ನನ್ನ ಆಯ್ಕೆ ಎಂದು ಹೇಳಿದ್ದಾರೆ.

ಸಿಡ್ನಿ(ಜ.03): ಟೆಸ್ಟ್ ವೃತ್ತಿಬದುಕನ್ನು ಗಂಭೀರವಾಗಿ ಪರಿಗಣಿಸಿರುವ ಆಸ್ಟ್ರೇಲಿಯಾದ ಆಲ್ರೌಂಡರ್ ಮಿಚೆಲ್ ಮಾರ್ಷ್ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ 11ನೇ ಆವೃತ್ತಿಯಿಂದ ಹಿಂದೆ ಸರಿದಿದ್ದಾರೆ. ಐಪಿಎಲ್ ಬದಲು ಇಂಗ್ಲೆಂಡ್ ಕೌಂಟಿಯಲ್ಲಿ ಆಡುವುದಾಗಿ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಳೆದ ಐಪಿಎನ್‌'ನಲ್ಲಿ ಮಾರ್ಷ್, ₹4.8 ಕೋಟಿಗೆ ಬಿಕರಿಯಾಗಿ, ಪುಣೆ ಪರ ಆಡಿದ್ದರು. ಈ ವರ್ಷ ಇನ್ನೂ ಹೆಚ್ಚಿನ ಮೊತ್ತಕ್ಕೆ ಹರಾಜುಗೊಳ್ಳುವ ನಿರೀಕ್ಷೆಯಿತ್ತು. ಆದರೆ, ಇದೇ ವರ್ಷಾಂತ್ಯಕ್ಕೆ ಇಂಗ್ಲೆಂಡ್‌'ನಲ್ಲಿ ನಡೆಯಲಿರುವ ಆ್ಯಷಸ್ ಟೆಸ್ಟ್ ಮೇಲೆ ಕಣ್ಣಿಟ್ಟಿರುವ ಮಿಚೆಲ್, ಇಂಗ್ಲೆಂಡ್ ಕೌಂಟಿ ಟೂರ್ನಿಯಲ್ಲಿ ಸಸೆಕ್ಸ್ ತಂಡದಲ್ಲಿ ಆಡಲಿದ್ದಾರೆ.

ಹಾಲಿ ನಡೆಯುತ್ತಿರುವ ಆ್ಯಷಸ್ ಸರಣಿಯಲ್ಲಿ ಚೊಚ್ಚಲ ಶತಕ ಸಿಡಿಸಿರುವ ಮಾರ್ಷ್, ಆಸ್ಟ್ರೇಲಿಯಾ ತಂಡಕ್ಕಾಗಿ ಆಡುವುದು ನನ್ನ ಆಯ್ಕೆ ಎಂದು ಹೇಳಿದ್ದಾರೆ.