Asianet Suvarna News Asianet Suvarna News

IPL ಆಡದೇ ವಿಮೆಗೆ ಕೈಚಾಚಿದ ಮಿಚೆಲ್ ಸ್ಟಾರ್ಕ್

ಐಪಿಎಲ್ ಹಿಂದಿನ ಆವೃತ್ತಿಗೂ ಮೊದಲು ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲೇ ಸ್ಟಾರ್ಕ್ ಗಾಯಗೊಂಡಿದ್ದರು. ಅಲ್ಲದೆ, ಈ ಕಾರಣಕ್ಕಾಗಿ ಐಪಿಎಲ್ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯವನ್ನೂ ಆಡಿರಲಿಲ್ಲ. ಆದರೆ ಇದೀಗ ವಿಮೆಗೆ ಅರ್ಜಿ ಸಲ್ಲಿಸಿದ್ದಾರೆ.

Mitchell Starc initiates legal action over IPL insurance payout
Author
Melbourne VIC, First Published Apr 11, 2019, 11:18 PM IST

ಮೆಲ್ಬರ್ನ್: ಕಳೆದ ಸಾಲಿನ ಐಪಿಎಲ್ ಪಂದ್ಯಕ್ಕೆ ಗಾಯದ ಸಮಸ್ಯೆಯಿಂದಾಗಿ ಒಂದೂ ಪಂದ್ಯ ಆಡದಿದ್ದ ಕೋಲ್ಕತಾ ನೈಟ್ ರೈಡರ್ಸ್ ಆಟಗಾರ, ಆಸ್ಟ್ರೇಲಿಯಾ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಈಗ ಐಪಿಎಲ್ ಒಪ್ಪಂದದ ಪ್ರಕಾರ ವಿಮಾ ಸೌಲಭ್ಯ ಪಡೆದುಕೊಳ್ಳಲು ಕಾನೂನಿನ ಮೊರೆ ಹೋಗಿದ್ದಾರೆ ಎಂದು ಆಸ್ಟ್ರೇಲಿಯಾ ಮಾಧ್ಯಮವೊಂದು ವರದಿ ಮಾಡಿದೆ.

ವಿಶ್ವಕಪ್ ಟೂರ್ನಿಗೂ ಮುನ್ನ ಆಸ್ಟ್ರೇಲಿಯಾಗೆ ಡಬಲ್ ಶಾಕ್!

‘ಸಿಡ್ನಿ ಮಾರ್ನಿಂಗ್ ಹೆರಾಲ್ಡ್’ ಈ ಕುರಿತು ವರದಿ ಪ್ರಕಟಿಸಿದ್ದು, ಸ್ಟಾರ್ಕ್ ಕಳೆದ ವಾರ ವಿಕ್ಟೋರಿಯನ್ ಕೌಂಟಿ ಕೋರ್ಟ್‌ನಲ್ಲಿ ವಿಮಾ ಸೌಲಭ್ಯ ಪಡೆದುಕೊಳ್ಳಲು ಅರ್ಜಿ ಸಲ್ಲಿಸಿದ್ದಾರೆ. ಐಪಿಎಲ್ ಹಿಂದಿನ ಆವೃತ್ತಿಗೂ ಮೊದಲು ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲೇ ಸ್ಟಾರ್ಕ್ ಗಾಯಗೊಂಡಿದ್ದರು. ಅಲ್ಲದೆ, ಈ ಕಾರಣಕ್ಕಾಗಿ ಐಪಿಎಲ್ ಟೂರ್ನಿಯಲ್ಲಿ ಒಂದೇ
ಒಂದು ಪಂದ್ಯವನ್ನೂ ಆಡಿರಲಿಲ್ಲ. 

2018ರ ಆವೃತ್ತಿಗಾಗಿ ಕೆಕೆಆರ್, ಆಸೀಸ್ ವೇಗಿ ಮಿಚೆಲ್ ಸ್ಟಾರ್ಕ್ ಜೊತೆ ₹10.60ಕೋಟಿ ಒಪ್ಪಂದ ಮಾಡಿಕೊಂಡು ಖರೀದಿಸಿತ್ತು. ಗಾಯದಿಂದಾಗಿ ಸ್ಟಾರ್ಕ್ ಭಾರತಕ್ಕೆ ಬಂದಿರಲಿಲ್ಲ.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.

Follow Us:
Download App:
  • android
  • ios