2014ರಲ್ಲಿ ಹಫೀಜ್ ಬೌಲಿಂಗ್ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ನಿಷೇಧಕ್ಕೆ ಒಳಗಾಗಿದ್ದರು.

ದುಬೈ(ಅ.20): ಪಾಕಿಸ್ತಾನದ ಆಫ್ ಸ್ಪಿನ್ನರ್ ಮೊಹಮ್ಮದ್ ಹಫೀಜ್, ಅಬು ದಾಭಿಯಲ್ಲಿ ಶ್ರೀಲಂಕಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಅನುಮಾನಸ್ಪದ ಶೈಲಿಯಲ್ಲಿ ಬೌಲಿಂಗ್ ಮಾಡಿದ ಆರೋಪಕ್ಕೆ ಗುರಿಯಾಗಿದ್ದು, ಮತ್ತೊಮ್ಮೆ ನಿಷೇಧಕ್ಕೆ ಒಳಗಾಗುವ ಭೀತಿ ಎದುರಿಸುತ್ತಿದ್ದಾರೆ.

ಪಂದ್ಯದ ಅಧಿಕಾರಿಗಳು ಹಫೀಜ್ ಬೌಲಿಂಗ್ ಶೈಲಿ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ ಎಂದು ಐಸಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಆದರೆ ಪಾಕಿಸ್ತಾನ ಮಾತ್ರ ಹಫೀಜ್ ಬೌಲಿಂಗ್ ಶೈಲಿ ನ್ಯಾಯಯುತವಾಗಿದೆ ಎಂದು ಸಮರ್ಥಿಸಿಕೊಳ್ಳುತ್ತಿದೆ.

14 ದಿನದೊಳಗೆ ಹಫೀಜ್ ಬೌಲಿಂಗ್ ಪರೀಕ್ಷೆಗೆ ಹಾಜರಾಗಬೇಕಿದೆ. 2014ರಲ್ಲಿ ಹಫೀಜ್ ಬೌಲಿಂಗ್ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ನಿಷೇಧಕ್ಕೆ ಒಳಗಾಗಿದ್ದರು.