ಅಂಡರ್-19 ವಿಶ್ವಕಪ್‌'ಗೆ ನ್ಯೂಜಿಲೆಂಡ್‌'ಗೆ ತೆರಳುತ್ತಿದ್ದ ವೇಳೆ ವಿಮಾನದಲ್ಲಿ, ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಜತೆ ಪಾಕಿಸ್ತಾನ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಸೆಲ್ಫಿ ತೆಗೆಸಿಕೊಂಡು ಸಂತಸ ಹಂಚಿಕೊಂಡಿದ್ದಾರೆ.
ನವದೆಹಲಿ(ಡಿ.30): 'ದ ವಾಲ್' ಖ್ಯಾತಿಯ ರಾಹುಲ್ ದ್ರಾವಿಡ್'ಗೆ ಜಗತ್ತಿನ ಮೂಲೆ ಮೂಲೆಗಳಲ್ಲಿ ಅಭಿಮಾನಿಗಳಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತೇ ಇದೆ. ಅದೇ ರೀತಿ ಪಾಕಿಸ್ತಾನದ ಅಂತರಾಷ್ಟ್ರೀಯ ಕ್ರಿಕೆಟಿಗ ಮೊಹಮದ್ ಹಫೀಜ್ ಕೂಡಾ ದ್ರಾವಿಡ್ ಅಭಿಮಾನಿ ಎಂಬ ವಿಚಾರವೀಗ ಬಯಲಾಗಿದೆ.
ಹೌದು, ಅಂಡರ್-19 ವಿಶ್ವಕಪ್'ಗೆ ನ್ಯೂಜಿಲೆಂಡ್'ಗೆ ತೆರಳುತ್ತಿದ್ದ ವೇಳೆ ವಿಮಾನದಲ್ಲಿ, ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಜತೆ ಪಾಕಿಸ್ತಾನ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಸೆಲ್ಫಿ ತೆಗೆಸಿಕೊಂಡು ಸಂತಸ ಹಂಚಿಕೊಂಡಿದ್ದಾರೆ.
ನ್ಯೂಜಿಲೆಂಡ್ ವಿರುದ್ಧ ಸೀಮಿತ ಓವರ್ ಸರಣಿಯನ್ನಾಡಲು ಪಾಕಿಸ್ತಾನ ತಂಡ, ಭಾರತ ಅಂಡರ್-19 ತಂಡ ಪ್ರಯಾಣಿಸುತ್ತಿದ್ದ ವಿಮಾನದಲ್ಲೇ ತೆರಳುತ್ತಿತ್ತು. ಈ ವೇಳೆ ದ್ರಾವಿಡ್ ಜತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿರುವ ಪಾಕಿಸ್ತಾನದ ಸ್ಟಾರ್ ಆಲ್ರೌಂಡರ್ ಮೊಹಮದ್ ಹಫೀಜ್, ಟ್ವೀಟರ್'ನಲ್ಲಿ ಫೋಟೋವನ್ನು ಹಾಕಿ ದ್ರಾವಿಡ್ರಂತಹ ದಿಗ್ಗಜ ಆಟಗಾರನನ್ನು ಭೇಟಿ ಮಾಡಿದ್ದು ತುಂಬಾ ಖುಷಿ ನೀಡಿದೆ ಎಂದು ಬರೆದಿದ್ದಾರೆ.
ಈ ಟ್ವೀಟ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
