ಮೊಹಮ್ಮದ್ ಶಮಿ 2016ರ ನವೆಂಬರ್'ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ಮೊಣಕಾಲು ಗಾಯಕ್ಕೆ ಒಳಗಾಗಿದ್ದು ಆನಂತರ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದರು.
ಧರ್ಮಶಾಲಾ(ಮಾ.22): ಮೊಣಕಾಲು ಗಾಯದಿಂದಾಗಿ ತಂಡದಿಂದ ಹೊರಬಿದ್ದಿದ್ದ ವೇಗದ ಬೌಲರ್ ಮೊಹಮ್ಮದ್ ಶಮಿ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್'ಗೆ ತಂಡವನ್ನು ಕೂಡಿಕೊಂಡಿದ್ದಾರೆ. ಒಂದು ವೇಳೆ ಶಮಿ ಆಡುವ 11ರ ಬಳಗದಲ್ಲಿ ಕಾಣಿಸಿಕೊಂಡರೆ ಟೀಂ ಇಂಡಿಯಾದ ಬೌಲಿಂಗ್ ವಿಭಾಗ ಇನ್ನಷ್ಟು ಬಲಿಷ್ಟವಾಗಲಿದೆ
ವೇಗಿಗಳಿಗೆ ನೆರವು ನೀಡುವ ಧರ್ಮಶಾಲ ಪಿಚ್'ನಲ್ಲಿ ಮೊಹಮ್ಮದ್ ಶಮಿ ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಈಗಾಗಲೇ ನಾಲ್ಕು ಪಂದ್ಯಗಳ ಸರಣಿಯಲ್ಲಿ ತಲಾ ಒಂದೊಂದು ಪಂದ್ಯ ಗೆದ್ದಿರುವ ಉಭಯ ತಂಡಗಳಿಗೆ ಮೂರನೇ ಪಂದ್ಯವು ಡ್ರಾನಲ್ಲಿ ಅಂತ್ಯವಾಗಿರುವುದರಿಂದ ನಾಲ್ಕನೇ ಹಾಗೂ ಅಂತಿಮ ಪಂದ್ಯ ಸಾಕಷ್ಟು ಮಹತ್ವದೆನಿಸಿದೆ.
ಮೊಹಮ್ಮದ್ ಶಮಿ 2016ರ ನವೆಂಬರ್'ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ಮೊಣಕಾಲು ಗಾಯಕ್ಕೆ ಒಳಗಾಗಿದ್ದು ಆನಂತರ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದರು.
ಇತ್ತೀಚೆಗಷ್ಟೆ ಫಿರೋಜ್ ಷಾ ಕೋಟ್ಲಾದಲ್ಲಿ ಮುಕ್ತಾಯವಾದ ವಿಜಯ್ ಹಜಾರೆ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಬಂಗಾಳ ತಂಡವನ್ನು ಪ್ರತಿನಿಧಿಸಿದ್ದ ಶಮಿ, ನಾಲ್ಕು ವಿಕೆಟ್ ಪಡೆದು ಗಮನ ಸೆಳೆದಿದ್ದರು.
