ಲಂಡನ್‌(ಮೇ.28): 2019ರ ಐಸಿಸಿ ಏಕದಿನ ವಿಶ್ವಕಪ್‌ ಟಿಕೆಟ್‌ಗಳನ್ನು 1 ಲಕ್ಷಕ್ಕೂ ಅಧಿಕ ಮಹಿಳೆಯರು ಖರೀದಿಸಿದ್ದಾರೆ ಎಂದು ವಿಶ್ವಕಪ್‌ ಟೂರ್ನಿ ನಿರ್ದೇಶಕ ಸ್ಟೀವ್‌ ಎಲ್ವರ್ಥಿ ಸೋಮವಾರ ಹೇಳಿದ್ದಾರೆ. 

ವಿಶ್ವಕಪ್ ಬಗೆಗಿನ ಸಂಪೂರ್ಣ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ...

‘ಈ ಬಾರಿ ವಿಶ್ವಕಪ್‌ಗೆ ಅಭಿಮಾನಿಗಳಿಂದ ವ್ಯಾಪಕ ಬೆಂಬಲ ದೊರೆಯುತ್ತಿದೆ. 1.10 ಲಕ್ಷ ಮಹಿಳೆಯರ ಟಿಕೆಟ್‌ ಖರೀದಿ ಮಾಡಿದ್ದಾರೆ. 16 ವಯಸ್ಸಿನೊಳಗಿನ 1 ಲಕ್ಷ ಮಂದಿ ಸಹ ಟಿಕೆಟ್‌ಗಳನ್ನು ಖರೀದಿಸಿದ್ದಾರೆ. ಯುವಕರು ಕ್ರೀಡೆಯತ್ತ ಆಕರ್ಷಿತರಾಗುತ್ತಿದ್ದಾರೆ ಎನ್ನುವುದಕ್ಕೆ ಇದೇ ಸಾಕ್ಷಿ. ಇದೇ ವೇಳೆ 2 ಲಕ್ಷಕ್ಕೂ ಅಧಿಕ ಮಂದಿ ಇದೇ ಮೊದಲ ಬಾರಿಗೆ ಕ್ರಿಕೆಟ್‌ ವೀಕ್ಷಿಸಲು ಕ್ರೀಡಾಂಗಣಕ್ಕೆ ಆಗಮಿಸಲಿದ್ದಾರೆ’ ಎಂದು ಎಲ್ವರ್ಥಿ ಹೇಳಿದ್ದಾರೆ.

12ನೇ ಆವೃತ್ತಿಯ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಇಂಗ್ಲೆಂಡ್ ಆತಿಥ್ಯ ವಹಿಸಿದ್ದು, ಮೇ.30ರಂದು ಆತಿಥೇಯ ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಭಾರತ ತಂಡವು ಜೂನ್ 05ರಂದು ದಕ್ಷಿಣ ಆಫ್ರಿಕಾ ವಿರುದ್ಧ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ.

ವಿಶ್ವಕಪ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ ನೋಡಿ...