ಅಂತರಾಷ್ಟ್ರೀಯ ಕ್ರಿಕೆಟ್'ಗೆ ಗುಡ್'ಬೈ ಹೇಳಿದ ಮಾರ್ಕೆಲ್

First Published 27, Feb 2018, 3:57 PM IST
Morkel to retire from international cricket after Australia series
Highlights

ಏಪ್ರಿಲ್ 3ರಂದು ಜೋಹಾನ್ಸ್'ಬರ್ಗ್'ನಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯವು ಮಾರ್ಕೆಲ್ ಪಾಲಿಗೆ ಕೊನೆಯ ಟೆಸ್ಟ್ ಪಂದ್ಯವಾಗಿರಲಿದೆ. ಮಾರ್ಕೆಲ್, ದ.ಆಫ್ರಿಕಾ ಪರ 83 ಟೆಸ್ಟ್, 117 ಏಕದಿನ ಹಾಗೂ 44 ಟಿ20 ಪಂದ್ಯಗಳನ್ನಾಡಿದ್ದು, ಒಟ್ಟು 529 ವಿಕೆಟ್ ಕಬಳಿಸಿದ್ದಾರೆ.

ಜೊಹಾನ್ಸ್‌ಬರ್ಗ್(ಫೆ.27): ಆಸ್ಟ್ರೇಲಿಯಾ ಟೆಸ್ಟ್ ಸರಣಿ ಬಳಿಕ ದಕ್ಷಿಣ ಆಫ್ರಿಕಾ ತಂಡದ ವೇಗದ ಬೌಲರ್ ಮಾರ್ನೆ ಮಾರ್ಕೆಲ್ ಅಂತರಾಷ್ಟ್ರೀಯ ಕ್ರಿಕೆಟ್'ನಿಂದ ನಿವೃತ್ತಿಯಾಗಲಿದ್ದಾರೆ. ತವರಿನಲ್ಲಿ ಮಾರ್ಚ್ 01 ರಿಂದ 4 ಪಂದ್ಯಗಳ ಟೆಸ್ಟ್ ಸರಣಿ ಆರಂಭಗೊಳ್ಳಲಿದೆ.

ಇದು ಕಠಿಣ ನಿರ್ಧಾರ. ಆದರೆ ನಿವೃತ್ತಿ ಘೋಷಿಸಲು ಇದು ಸರಿಯಾದ ಸಮಯ ಎಂದು ಭಾವಿಸಿ ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಮಾರ್ಕೆಲ್ ಹೇಳಿದ್ದಾರೆ. ಬಿಡುವಿಲ್ಲದ ವೇಳಾಪಟ್ಟಿಯಿಂದ ತಾವು ದಣಿಯುತ್ತಿರುವುದಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ್ದಾರೆ.

loader