IPL ಟೂರ್ನಿಯಲ್ಲಿ ಗರಿಷ್ಠ ಸೆಂಚುರಿ ಸಿಡಿಸಿದ ಸಾಧಕರು!

ಐಪಿಎಲ್ ಟೂರ್ನಿಯಲ್ಲಿ ಹಲವು ಕ್ರಿಕೆಟಿಗರು ಸೆಂಚುರಿ ಸಿಡಿಸಿದ್ದಾರೆ. ಆದರೆ ಗರಿಷ್ಠ ಸೆಂಚುರಿ ಸಿಡಿಸಿದವರು ಕೆಲವೇ ಮಂದಿ. ಪ್ರತಿ ಆವೃತ್ತಿಯಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಗರಿಷ್ಠ ಶತಕ ದಾಖಲಿಸಿದ ಕ್ರಿಕೆಟಿಗರು ಯಾರು? ಇಲ್ಲಿದೆ ವಿವರ.
 

Most century hit by batsman in IPL cricket history

ಬೆಂಗಳೂರು(ಫೆ.13): ಪ್ರತಿ ಐಪಿಎಲ್ ಟೂರ್ನಿ ಅಭಿಮಾನಿಗಳಿಗೆ ಭರಪೂರ ಮನರಂಜನೆ ನೀಡಿದೆ. ಸ್ಫೋಟಕ ಬ್ಯಾಟಿಂಗ್, ಆಕರ್ಷಕ ಶತಕಗಳು ಚುಟುಕು ಕ್ರಿಕೆಟ್ ಟೂರ್ನಿಯ ಕಳೆ ಹೆಚ್ಚಿಸಿದೆ. ಟಿ20 ಕ್ರಿಕೆಟ್‌ನಲ್ಲಿ ಶತಕ ಸಿಡಿಸುವುದು ಸುಲಭದ ಮಾತಲ್ಲ. ಕೆಲ ಬ್ಯಾಟ್ಸ್‌ಮನ್‌ಗಳು ಐಪಿಎಲ್ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿ ಮಿಂಚಿದ್ದಾರೆ. ಗರಿಷ್ಠ ಶತಕ ಸಿಡಿಸಿದ ಸಾಧಕರ ಲಿಸ್ಟ್ ಇಲ್ಲಿದೆ.

ಇದನ್ನೂ ಓದಿ: ಆಸೀಸ್‌ ವಿರುದ್ಧ ತಮಾಷೆ: ವೀರೂಗೆ ಹೇಡನ್‌ ಎಚ್ಚರಿಕೆ!

1 ಕ್ರಿಸ್ ಗೇಲ್
ಐಪಿಎಲ್ ಟೂರ್ನಿಯಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಭಾರತೀಯರ ನೆಚ್ಚಿನ ಕ್ರಿಕೆಟಿಗನಾಗಿರುವ ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್ ಗೇಲ್, ಗರಿಷ್ಠ ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ. ಕಳೆದ 11 ಆವೃತ್ತಿಗಳಲ್ಲಿ ಗೇಲ್ ಒಟ್ಟು 6 ಶತಕ ಸಿಡಿಸಿದ್ದಾರೆ.ಈ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ.

2 ವಿರಾಟ್ ಕೊಹ್ಲಿ
ಶತಕದ ಲಿಸ್ಟ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್ ಕೊಹ್ಲಿ 2ನೇ ಸ್ಥಾನದಲ್ಲಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಕೊಹ್ಲಿ 4 ಶತಕ ಸಿಡಿಸಿದ್ದಾರೆ. ವಿಶೇಷ ಅಂದರೆ 2016ನೇ ಆವೃತ್ತಿಯಲ್ಲಿ ಕೊಹ್ಲಿ 4 ಶತಕ ಸಿಡಿಸಿದ್ದಾರೆ.

ಇದನ್ನೂ ಓದಿ: 2021ರ ಏಕದಿನ ವಿಶ್ವಕಪ್‌: ಭಾರತಕ್ಕಿಲ್ಲ ನೇರ ಪ್ರವೇಶ?

3 ಶೇನ್ ವಾಟ್ಸನ್
ಐಪಿಎಲ್ ಟೂರ್ನಿಯ ಯಶಸ್ವಿ ಆಲ್ರೌಂಡರ್ ಆಗಿ ಗುರುತಿಸಿಕೊಂಡಿರುವ ಶೇನ್ ವ್ಯಾಟ್ಸ್‌ನ್ 2018ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಅದ್ಬುತ ಪ್ರದರ್ಶನ ನೀಡಿದ್ದರು. ಸಿಎಸ್‌ಕೆ, ರಾಜಸ್ಥಾನ ರಾಯಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೂಲಕ ಅಬ್ಬರಿಸಿರುವ ವ್ಯಾಟ್ಸ್‌ನ್ 4 ಸೆಂಚುರಿ ಸಿಡಿಸಿದ್ದಾರೆ.

4 ಎಬಿ ಡಿವಿಲಿಯರ್ಸ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ಸ್ಫೋಟಕ ಬ್ಯಾಟಿಂಗ್ ಮೂಲಕ ಮನೆ ಮಾತಾಗಿದ್ದಾರೆ. ಮೊದಲು ಡೆಲ್ಲಿ ಡೇರ್ ಡೆವಿಲ್ಸ್ ತಂಡದಲ್ಲಿದ್ದ ಎಬಿಡಿ, ಆರ್‌ಸಿಬಿ ತಂಡದಲ್ಲಿ ಫಾರ್ಮ್ ಕಂಡುಕೊಂಡರು. ಎಬಿಡಿ ಐಪಿಎಲ್ ಟೂರ್ನಿಯಲ್ಲಿ 3 ಶತಕ ಸಿಡಿಸಿದ್ದಾರೆ.

ಇದನ್ನೂ ಓದಿ:ಕಾರು ಅಪಘಾತದಲ್ಲಿ ಸುರೇಶ್ ರೈನಾ ಸಾವು- ಸುಳ್ಳು ಸುದ್ದಿ ಹಬ್ಬಿದವರಿಗೆ ತಿರುಗೇಟು!

5 ಡೇವಿಡ್ ವಾರ್ನರ್
ಸ್ಫೋಟಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ 2009 ರಿಂದ 2013ರ ವರೆಗೆ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಪರ ಆಡಿದ್ದರು. 2010ರಲ್ಲಿ ಮೊದಲ ಸೆಂಚುರಿ ಸಿಡಿಸಿದ ವಾರ್ನರ್, 2014ರಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ ಸೇರಿಕೊಂಡರು. ಐಪಿಎಲ್ ಟೂರ್ನಿಯಲ್ಲಿ ವಾರ್ನರ್ ಒಟ್ಟು 3 ಶತಕ ದಾಖಲಿಸಿದ್ದಾರೆ.

Latest Videos
Follow Us:
Download App:
  • android
  • ios