2019ರ ವಿಶ್ವಕಪ್: ಎಂ.ಎಸ್.ಧೋನಿಗೆ 4ನೇ ಕ್ರಮಾಂಕ!
ಆಸ್ಟ್ರೇಲಿಯಾ ವಿರುದ್ದದ ಏಕದಿನ ಸರಣಿ ಬಳಿಕ ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ಬ್ಯಾಟಿಂಗ್ ಕ್ರಮಾಂಕ ಹೆಚ್ಚು ಚರ್ಚೆಯಾಗುತ್ತಿದೆ. ಧೋನಿ ಯಾವ ಬ್ಯಾಟಿಂಗ್ ಆರ್ಡರ್‌ನಲ್ಲಿ ಕಣಕ್ಕಿಳಿಯಬೇಕು? ಇಲ್ಲಿದೆ ಉತ್ತರ.
ನವದೆಹಲಿ(ಜ.25): ನ್ಯೂಜಿಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಸೈಲೆಂಟ್ ಆಗಿ 2019ರ ವಿಶ್ವಕಪ್ ಟೂರ್ನಿಗೂ ತಯಾರಿ ನಡೆಸುತ್ತಿದೆ. ಇದರ ಬೆನ್ನಲ್ಲೇ ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗಲ ಎಂ.ಎಸ್.ಧೋನಿ ಬ್ಯಾಟಿಂಗ್ ಆರ್ಡರ್ ಕುರಿತು ಸಾಕಷ್ಟು ಚರ್ಚೆಯಾಗುತ್ತಿದೆ. ಆಸ್ಟ್ರೇಲಿಯಾ ಸರಣಿ ಬಳಿಕ ಧೋನಿ ಬ್ಯಾಟಿಂಗ್ ಕ್ರಮಾಂಕ ಯಾವುದು ಅನ್ನೋದು ಕ್ರಿಕೆಟ್ ವಲಯದಲ್ಲಿ ಚರ್ಚೆಯಾಗುತ್ತಿದೆ.
ಇದನ್ನೂ ಓದಿ: ಬೌಲಿಂಗ್ ಹೇಳಿಕೊಟ್ಟು ವಿಕೆಟ್ ಎಗರಿಸಿದ ಧೋನಿ: ವಿಡಿಯೋ ವೈರಲ್..!
ಚರ್ಚೆಯ ಬೆನ್ನಲ್ಲೇ ಟೀಂ ಇಂಡಿಯಾ ಆಲ್ರೌಂಡರ್ ಸುರೇಶ್ ರೈನಾ, ಧೋನಿ ಬ್ಯಾಟಿಂಗ್ ಕ್ರಮಾಂಕ ಕುರಿತು ಮಾತನಾಡಿದ್ದಾರೆ. ಆಸ್ಟ್ರೇಲಿಯಾ ಸರಣಿಯಲ್ಲಿ ಧೋನಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಭಾರತಕ್ಕೆ ಗೆಲುವು ತಂದುಕೊಟ್ಟಿದ್ದಾರೆ. ಹೀಗಾಗಿ ಧೋನಿಗೆ 4ನೇ ಕ್ರಮಾಂಕ ಸೂಕ್ತ ಎಂದಿದ್ದಾರೆ.
ಇದನ್ನೂ ಓದಿ: ಗೆಲುವಿನ ಬಳಿಕ ಧೋನಿ-ಕೊಹ್ಲಿ ಕ್ರೀಡಾಂಗಣದಲ್ಲಿ ಮಕ್ಕಳಾಟ-ವಿಡಿಯೋ ವೈರಲ್!
ಆಸ್ಟ್ರೇಲಿಯಾ ವಿರುದ್ದದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಧೋನಿ ಸತತ 3 ಅರ್ಧಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. 3 ಪಂದ್ಯದಿಂದ 193 ರನ್ ಸಿಡಿಸಿದ ಧೋನಿ ಸರಣಿಯಲ್ಲಿ ಗರಿಷ್ಠ ರನ್ ಸಿಡಿಸಿದ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ.