ರಾಂಚಿ(ಮಾ.07): ಆಸ್ಟ್ರೇಲಿಯಾ ವಿರುದ್ದದ 3ನೇ ಏಕದಿನ ಪಂದ್ಯಕ್ಕಾಗಿ ರಾಂಚಿಯಲ್ಲಿ ಟೀಂ ಇಂಡಿಯಾ ಅಭ್ಯಾಸ ನಡೆಸುತ್ತಿದೆ. ಧೋನಿ ತವರಿನಲ್ಲಿರುವ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಧೋನಿ ತಮ್ಮ ಮನೆಯಲ್ಲಿ ಔತಣ ಕೂಟ ಆಯೋಜಿಸಿದ್ದರು. 

ಇದನ್ನೂ ಓದಿ: ರಾಂಚಿಗೆ ಬಂದಿಳಿದ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಧೋನಿ ನೀಡಿದ್ರು ಸರ್ಪ್ರೈಸ್!

ರಾಂಚಿಗೆ ಬಂದಿಳಿದ ಟೀಂ ಇಂಡಿಯಾ ಕ್ರಿಕೆಟಿಗರನ್ನು ತನ್ನ ಹಮ್ಮರ್ ಕಾರಿನಲ್ಲಿ ಕೂರಿಸಿ ಮನೆಗೆ ಕರೆದೊಯ್ದ ಎಂ.ಎಸ್.ಧೋನಿ ಭಾರಿ ಸುದ್ದಿಯಾಗಿದ್ದರು. ಧೋನಿ ಸ್ವತಃ ತಾವೇ ಡ್ರೈವ್ ಮಾಡಿಕೊಂಡು ಟೀಂ ಇಂಡಿಯಾ ಕ್ರಿಕೆಟಿಗರನ್ನ ಮನೆಗೆ ಕರೆದೊಯ್ದಿದ್ದರು. ರಾತ್ರಿ ವೇಳೆ ಧೋನಿ ಟೀಂ ಇಂಡಿಯಾ ಕ್ರಿಕೆಟಿಗರು ಹಾಗೂ ಸಿಬ್ಬಂದಿಗಳಿ ಅದ್ಧೂರಿ ಔತಣ ಕೂಟ ಆಯೋಜಿಸಿದ್ದರು. 

 

;

 

ಇದನ್ನೂ ಓದಿ: ಸೆಕ್ಯೂರಿಟಿ ಕಣ್ತಪ್ಪಿಸಿ ಒಳ ನುಗ್ಗಿದ ಅಭಿಮಾನಿ ಜೊತೆ ಧೋನಿ ಫನ್!

ಧೋನಿ ಪತ್ನಿ ಸಾಕ್ಷಿ ಹಾಗೂ ಧೋನಿ ಪೋಷಕರು ಟೀಂ ಇಂಡಿಯಾ ಕ್ರಿಕೆಟಿಗರನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಬಳಿಕ ವಿಶೇಷ ಔತಣ ಕೂಡ ಏರ್ಪಡಿಸಿದ್ದರು. ಯಜುವೇಂದ್ರ ಚೆಹಾಲ್, ಕುಲ್ದೀಪ್ ಯಾದವ್ ಸೇರಿದಂತೆ ಹಲವು ಕ್ರಿಕೆಟಿಗರು ಔತಣ ಕೂಟ ದ ಫೋಟೋ ಸಾಮಾಜಿ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ