ದುಬೈ(ಸೆ.24): ಪಾಕಿಸ್ತಾನ ವಿರುದ್ದ ಟೀಂ ಇಂಡಿಯಾ ದಾಖಲೆಯ ಗೆಲುವು ಸಾಧಿಸಿದ್ದರೆ, ಇತ್ತ ಎಂ.ಎಸ್ ಧೋನಿ ಕೂಡ ದಾಖಲೆ ಬರೆದಿದ್ದಾರೆ. ಪಾಕ್ ವಿರುದ್ಧದ ಪಂದ್ಯದಲ್ಲಿ ಧೋನಿ, ಮಾಜಿ ನಾಯಕ ರಾಹುಲ್ ದ್ರಾವಿಡ್ ದಾಖಲೆ ಮುರಿದಿದ್ದಾರೆ.

ಪಾಕಿಸ್ತಾನ ವಿರುದ್ಧದ ಪಂದ್ಯ ಧೋನಿ ಪಾಲಿಗೆ 505ನೇ ಅಂತಾರಾಷ್ಟ್ರೀಯ ಪಂದ್ಯ. ಏಕದಿನ, ಟಿ20 ಹಾಗೂ ಟೆಸ್ಟ್ ಪಂದ್ಯಗಳಿಂದ ಧೋನಿ 505 ಪಂದ್ಯ ಆಡಿದರು. ರಾಹುಲ್ ದ್ರಾವಿಡ್ ಒಟ್ಟು 504 ಅಂತಾರಾಷ್ಟ್ರೀಯ ಪಂದ್ಯ ಆಡಿದ್ದಾರೆ. ಇದೀಗ ಧೋನಿ ಈ ದಾಖಲೆ ಮುರಿದಿದ್ದಾರೆ.

ಭಾರತದ ಪರ ಗರಿಷ್ಠ ಅಂತಾರಾಷ್ಟ್ರೀಯ ಪಂದ್ಯ ಆಡಿದ ದಾಖಲೆಗೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪಾತ್ರರಾಗಿದ್ದಾರೆ. ಸಚಿನ್ ಓಟ್ಟು 664 ಅಂತಾರಾಷ್ಟ್ರೀಯ ಪಂದ್ಯ ಆಡಿದ್ದಾರೆ.