ಧೋನಿಯ ನಾಯಕತ್ವದಲ್ಲಿ ಟಿ20 ವಿಶ್ವಕಪ್, ಏಕದಿನ ವಿಶ್ವಕಪ್ ಸೇರಿದಂತೆ ಬಹುತೇಕ ಟ್ರೋಫಿಗಳನ್ನು ಗೆದ್ದುಕೊಂಡಿದೆ.

ನವದೆಹಲಿ(ಜ.10): ಸೀಮಿತ ಒವರ್'ಗಳ ಟೀಂ ಇಂಡಿಯಾ ನಾಯಕತ್ವದಿಂದ ಕೆಳಗಿಳಿಯುವಂತೆ ಎಂ.ಎಸ್.ಧೋನಿಯ ಮೇಲೆ ಯಾವುದೇ ಒತ್ತಡ ಹೇರಿಲ್ಲ. ಇದು ಅವರ ವೈಯುಕ್ತಿಕ ನಿರ್ಧಾರ ಎಂದು ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್'ಕೆ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೆಲವು ಮಾಧ್ಯಮಗಳಲ್ಲಿ ಕಳೆದ ಸೆಪ್ಟೆಂಬರ್ ತಿಂಗಳಿನಿಂದಲೇ ಧೋನಿಯನ್ನು ನಾಯಕತ್ವದಿಂದ ಕಡ್ಡಾಯವಾಗಿ ಕೆಳಗಿಳಿಸಲಾಯಿತು ಎಂಬ ವರದಿಗಳಿಗೆ ಪ್ರತಿಕ್ರಿಯಿಸಿದ ಪ್ರಸಾದ್, " ಜಾರ್ಖಂಡ್ ಮತ್ತು ಗುಜರಾತ್ ನಡುವಣದ ರಣಜಿ ಸೆಮಿಫೈನಲ್ ಪಂದ್ಯದ ವೇಳೆ ಸ್ವತಃ ಧೋನಿಯೇ ಈ ವಿಷಯವನ್ನು ನನ್ನಲ್ಲಿ ಹೇಳಿದರು" ಎಂದಿದ್ದಾರೆ.

ಧೋನಿಯ ನಾಯಕತ್ವದಲ್ಲಿ ಟಿ20 ವಿಶ್ವಕಪ್, ಏಕದಿನ ವಿಶ್ವಕಪ್ ಸೇರಿದಂತೆ ಬಹುತೇಕ ಟ್ರೋಫಿಗಳನ್ನು ಗೆದ್ದುಕೊಂಡಿದೆ. 2014ರಲ್ಲಿ ಟೆಸ್ಟ್ ನಾಯಕತ್ವ ಸ್ಥಾನದಿಂದ ಕೆಳಗಿಳಿದಿದ್ದ ಧೋನಿ ಈಗ ಟಿ20 ಹಾಗೂ ಏಕದಿನ ತಂಡದ ನಾಯಕತ್ವ ಸ್ಥಾನಕ್ಕೂ ರಾಜಿನಾಮೆ ಕೊಟ್ಟಿದ್ದಾರೆ.