'ಮುಂಬೈ ಹರ್ಭಜನ್ ಸಿಂಗ್ ಅನುಭವವನ್ನು ಮಿಸ್ ಮಾಡಿಕೊಳ್ಳಲಿದೆ'

First Published 6, Apr 2018, 10:46 PM IST
Mumbai will miss Harbhajan experience feels Kumble
Highlights

ಐಪಿಎಲ್ ಮೊದಲ ಆವೃತ್ತಿಯಿಂದ ಹತ್ತನೇ ಆವೃತ್ತಿವರೆಗೆ ಮುಂಬೈ ತಂಡವನ್ನು ಪ್ರತಿನಿಧಿಸಿದ್ದ ಹರ್ಭಜನ್ ಸಿಂಗ್ ಇದೇ ಮೊದಲ ಬಾರಿಗೆ ಸಿಎಸ್'ಕೆ ಪರ ಭಜ್ಜಿ ಕಣಕ್ಕಿಳಿಯುತ್ತಿದ್ದಾರೆ. ಹರ್ಭಜನ್ ಅನುಪಸ್ಥಿತಿಯಲ್ಲಿ ಆಲ್ರೌಂಡರ್ ಕೃನಾಲ್ ಪಾಂಡ್ಯ ಸ್ಪಿನ್ ವಿಭಾಗವನ್ನು ಮುನ್ನಡೆಸಲಿದ್ದಾರೆ ಎಂದು ಕುಂಬ್ಳೆ ಹೇಳಿದ್ದಾರೆ.

ಮುಂಬೈ(ಏ.06): ಚೆನ್ನೈ ಸೂಪರ್'ಕಿಂಗ್ಸ್ ತಂಡದ ಪಾಲಾಗಿರುವ ಅನುಭವಿ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರ ಸೇವೆಯನ್ನು ಮುಂಬೈ ಇಂಡಿಯನ್ಸ್ ತಂಡ ಮಿಸ್ ಮಾಡಿಕೊಳ್ಳಲಿದೆ ಎಂದು ಮುಂಬೈ ತಂಡದ ಮೆಂಟರ್ ಅನಿಲ್ ಕುಂಬ್ಳೆ ಅಭಿಪ್ರಾಯಪಟ್ಟಿದ್ದಾರೆ.

ಐಪಿಎಲ್ ಮೊದಲ ಆವೃತ್ತಿಯಿಂದ ಹತ್ತನೇ ಆವೃತ್ತಿವರೆಗೆ ಮುಂಬೈ ತಂಡವನ್ನು ಪ್ರತಿನಿಧಿಸಿದ್ದ ಹರ್ಭಜನ್ ಸಿಂಗ್ ಇದೇ ಮೊದಲ ಬಾರಿಗೆ ಸಿಎಸ್'ಕೆ ಪರ ಭಜ್ಜಿ ಕಣಕ್ಕಿಳಿಯುತ್ತಿದ್ದಾರೆ. ಹರ್ಭಜನ್ ಅನುಪಸ್ಥಿತಿಯಲ್ಲಿ ಆಲ್ರೌಂಡರ್ ಕೃನಾಲ್ ಪಾಂಡ್ಯ ಸ್ಪಿನ್ ವಿಭಾಗವನ್ನು ಮುನ್ನಡೆಸಲಿದ್ದಾರೆ ಎಂದು ಕುಂಬ್ಳೆ ಹೇಳಿದ್ದಾರೆ.

ಇದೇವೇಳೆ ಜಸ್'ಪ್ರೀತ್ ಬುಮ್ರಾ ಹಾಗೂ ಮುಷ್ತಾಫಿಜುರ್ ರಹೀಮ್ ಡೆತ್ ಓವರ್'ಗಳಲ್ಲಿ ಮುಂಬೈ ಇಂಡಿಯನ್ಸ್ ಪರ ಈ ಬಾರಿ ಮಹತ್ವದ ಪಾತ್ರ ವಹಿಸಲಿದ್ದಾರೆ ಎಂದು ಕುಂಬ್ಳೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ನಾಳೆ(ಏ.07) ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್'ಕಿಂಗ್ಸ್ ತಂಡವನ್ನು ಎದುರಿಸಲಿದೆ.

loader