ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಟೆಸ್ಟ್'ನಲ್ಲೂ ನಾಯಕ ವಿರಾಟ್ ಕೊಹ್ಲಿ ಶತಕ ಸಿಡಿಸುವ ಮೂಲಕ ಹ್ಯಾಟ್ರಿಕ್ ಶತಕದ ಸಾಧನೆ ಮಾಡಿದ್ದಾರೆ.
ನವದೆಹಲಿ(ಡಿ.02): ವಿರಾಟ್ ಕೊಹ್ಲಿ ಸತತ ಹ್ಯಾಟ್ರಿಕ್ ಶತಕ(144*) ಹಾಗೂ ಆರಂಭಿಕ ಮುರುಳಿ ವಿಜಯ್(149*) ಅವರ ತಾಳ್ಮೆಯ ಶತಕದ ನೆರವಿನಿಂದ ಟೀಂ ಇಂಡಿಯಾ ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿದೆ.
ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಟೆಸ್ಟ್'ನಲ್ಲೂ ನಾಯಕ ವಿರಾಟ್ ಕೊಹ್ಲಿ ಶತಕ ಸಿಡಿಸುವ ಮೂಲಕ ಹ್ಯಾಟ್ರಿಕ್ ಶತಕದ ಸಾಧನೆ ಮಾಡಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್'ನಲ್ಲಿ ಕೊಹ್ಲಿ 20ನೇ ಶತಕ ಸಿಡಿಸಿದರು. ಅಲ್ಲದೇ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಹ್ಯಾಟ್ರಿಕ್ ಶತಕ ಸಿಡಿಸಿದ ಭಾರತದ ಮೊದಲ ಆಟಗಾರ ಎನ್ನುವ ಶ್ರೇಯವೂ ಕೊಹ್ಲಿ ಪಾಲಾಯಿತು. ಇದೀಗ ವಿರಾಟ್ ಕೊಹ್ಲಿ
ಮತ್ತೊಂದೆಡೆ ತಾಳ್ಮೆಯ ಬ್ಯಾಟಿಂಗ್ ನಡೆಸುತ್ತಿರುವ ಮುರುಳಿ ವಿಜಯ್ ವೃತ್ತಿ ಜೀವನದ 11ನೇ ಟೆಸ್ಟ್ ಶತಕ ಸಿಡಿಸಿದರು.
