ಪ್ರಸಕ್ತ ವರ್ಷದ ಆಗಸ್ಟ್ 10ರಂದು ಬ್ರಿಟನ್‌ನಲ್ಲಿ ಭುಜದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ರಹಮಾನ್, ತವರಿನಲ್ಲಿ ಇತ್ತೀಚೆಗಷ್ಟೇ ಮುಕ್ತಾಯ ಕಂಡ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಂಡಿರಲಿಲ್ಲ.

ಢಾಕಾ(ನ.05): ಯುವ ವೇಗದ ಬೌಲರ್ ಮುಸ್ತಾಫಿಜುರ್ ರಹಮಾನ್, ಮುಂದಿನ ಡಿಸೆಂಬರ್ ವೇಳೆ ನಡೆಯುವ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಬಾಂಗ್ಲಾ ತಂಡಕ್ಕೆ ಮರಳಲಿದ್ದಾರೆ ಎಂದು ಬಾಂಗ್ಲಾ ಕ್ರಿಕೆಟ್ ಅಧಿಕಾರಿಗಳು ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪ್ರಸಕ್ತ ವರ್ಷದ ಆಗಸ್ಟ್ 10ರಂದು ಬ್ರಿಟನ್‌ನಲ್ಲಿ ಭುಜದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ರಹಮಾನ್, ತವರಿನಲ್ಲಿ ಇತ್ತೀಚೆಗಷ್ಟೇ ಮುಕ್ತಾಯ ಕಂಡ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಂಡಿರಲಿಲ್ಲ. ಈ ಸರಣಿಯಲ್ಲಿ ಬಾಂಗ್ಲಾದೇಶ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್‌ನಲ್ಲಿ ಜಯ ಸಾಧಿಸಿ ಐತಿಹಾಸಿಕ ಗೆಲುವು ಪಡೆದ ಸಾಧನೆ ಮಾಡಿತ್ತು.

ಜುಲೈನಲ್ಲಿ ನಡೆದಿದ್ದ ಇಂಗ್ಲೀಷ್ ಕೌಂಟಿ ಕ್ರಿಕೆಟ್ ಟೂರ್ನಿಯಲ್ಲಿ ಆಡುವ ವೇಳೆ ರಹಮಾನ್ ಗಾಯಗೊಂಡಿದ್ದರು.