ಕೆಎಸ್‌ಸಿಎ ಕಾರ್ಯದರ್ಶಿ ಸ್ಥಾನಕ್ಕೆ ರಾಜಿನಾಮೆ ನೀಡಿದ ಬ್ರಿಜೇಶ್ ಪಟೇಲ್ ಸದ್ಯ ಬಿಸಿಸಿಐನಲ್ಲಿ ಉನ್ನತ ಹುದ್ದೆ ಮೇಲೆ ಕಣ್ಣಿಟ್ಟಿದ್ದು, ಇದೇ ಶನಿವಾರ ಬೆಂಗಳೂರಿನಲ್ಲಿ ಈ ಇಬ್ಬರೂ ಭೇಟಿಯಾಗಿ ಮುಂದಿನ ನಡೆಯ ಬಗ್ಗೆ ಚರ್ಚೆ ನಡೆಸುವ ಸಂಭವವಿದೆ ಎಂದು ವರದಿಯಲ್ಲಿ ಹೇಳಲಾಗಿದೆ.
ನವದೆಹಲಿ(ಜ.06): 2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಹಗರಣದಲ್ಲಿ ಸುಪ್ರೀಂ ಕೋರ್ಟ್ನಿಂದ ತೀವ್ರ ಮುಖಭಂಗ ಅನುಭವಿಸಿದ ಬಿಸಿಸಿಐನ ಮಾಜಿ ಅಧ್ಯಕ್ಷ ಎನ್. ಶ್ರೀನಿವಾಸನ್ ಮತ್ತೆ ಭಾರತೀಯ ಕ್ರಿಕೆಟ್'ನಲ್ಲಿ ಪ್ರಮುಖ ಪಾತ್ರ ವಹಿಸಲು ಕಾರ್ಯತಂತ್ರ ಹೆಣೆದಿದ್ದಾರೆ ಎಂದು ‘ದಿ ಇಂಡಿಯನ್ ಎಕ್ಸ್ಪ್ರೆಸ್’ ವರದಿ ಮಾಡಿದೆ.
ಕೆಎಸ್ಸಿಎ ಕಾರ್ಯದರ್ಶಿ ಸ್ಥಾನಕ್ಕೆ ರಾಜಿನಾಮೆ ನೀಡಿದ ಬ್ರಿಜೇಶ್ ಪಟೇಲ್ ಸದ್ಯ ಬಿಸಿಸಿಐನಲ್ಲಿ ಉನ್ನತ ಹುದ್ದೆ ಮೇಲೆ ಕಣ್ಣಿಟ್ಟಿದ್ದು, ಇದೇ ಶನಿವಾರ ಬೆಂಗಳೂರಿನಲ್ಲಿ ಈ ಇಬ್ಬರೂ ಭೇಟಿಯಾಗಿ ಮುಂದಿನ ನಡೆಯ ಬಗ್ಗೆ ಚರ್ಚೆ ನಡೆಸುವ ಸಂಭವವಿದೆ ಎಂದು ವರದಿಯಲ್ಲಿ ಹೇಳಲಾಗಿದೆ.
ಇನ್ನು ಕಳೆದೊಂದು ದಶಕದಿಂದಲೂ ತಮಿಳುನಾಡು ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿಯಾಗಿರುವ ಕಾಶಿ ವಿಶ್ವನಾಥ್ ಕೂಡ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಇದೇ 19ರೊಳಗೆ ಬಿಸಿಸಿಐಗೆ ಹೊಸ ಆಡಳಿತ ಸಮಿತಿಯನ್ನು ಸರ್ವೋಚ್ಚ ನ್ಯಾಯಾಲಯ ನೇಮಿಸಲಿದೆ. ಆದರೆ, ಲೋಧಾ ಸಮಿತಿ ಶಿಫಾರಸು ಅನುಷ್ಠಾನಗೊಳಿಸಲು ಸಂವಿಧಾನದಲ್ಲಿ ಬದಲಾವಣೆ ಅನಿವಾರ್ಯವಾಗಿದೆ. ಇದಕ್ಕೆ ನಾಲ್ಕನೇ ಮೂರರಷ್ಟು ಬೆಂಬಲ ಬೇಕು. ಆದರೆ, 17 ರಾಜ್ಯಗಳು ಈಗಲೂ ಸಂವಿಧಾನ ಬದಲಾವಣೆಗೆ ಒಪ್ಪುತ್ತಿಲ್ಲ. ಹೀಗಾಗಿ ಶ್ರೀನಿವಾಸನ್ ನೇತೃತ್ವದ ಈ ಸಭೆ ತೀವ್ರ ಕೌತುಕ ಕೆರಳಿಸಿದೆ.
