ನವದೆಹಲಿ (ಸೆ.17): ಮಾದಕ ವಸ್ತುವನ್ನು ಸೇವಿಸಿದ್ದಾರೆ ಎನ್ನುವ ಆರೋಪ ಹೊತ್ತಿರುವ ಕುಸ್ತಿಪಟು ನರಸಿಂಗ್ ಯಾದವ್ ಬಗ್ಗೆ ಸಿಬಿಐ ತನಿಖೆ ಪ್ರಾರಂಭಿಸಿದೆ ಎಂದು ಭಾರತೀಯ ಕುಸ್ತಿ ಒಕ್ಕೂಟ ಸ್ಪಷ್ಟಪಡಿಸಿದೆ. ಪ್ರಧಾನ ಮಂತ್ರಿ ಕಾರ್ಯಾಲಯವು ಶಿಫಾರಸ್ಸು ಮಾಡಿದ ನಂತರ ಈ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು.
ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ನರಸಿಂಗ್ ಯಾದವ್ ಪ್ರಕರಣವನ್ನು ಸಿಬಿಐಗೆ ವಹಿಸಬೇಕೇಂದು ಮನವಿ ಮಾಡಿಕೊಂಡಿದ್ದಾರೆ.
ಪ್ರಧಾನಿ ಕಾರ್ಯಾಲಯವು ನರಸಿಂಗ್ ಯಾದವ್ ಪ್ರಕರಣವನ್ನು ಸಿಬಿಐಗೆ ವಹಿಸಿದ್ದು ತನಿಖೆ ಪ್ರಾರಂಭಿಸಿದೆ ಎಂದು ಭೂಷಣ್ ಹೇಳಿದ್ದಾರೆ.
ಕಳೆದ ತಿಂಗಳು ಸಿಎಎಸ್ ( ಕೋರ್ಟ್ ಆಫ್ ಆರ್ಬಿಟ್ರೇಷನ್ ಫಾರ್ ಸ್ಪೋರ್ಟ್ಸ್) ನ್ಯಾಯಾಲಯವು ನರಸಿಂಗ್ ಯಾದವ್ ಮೇಲೆ ನಾಲ್ಕು ವರ್ಷಗಳ ಕಾಲ ನಿಷೇಧ ಹೇರಿದೆ.
