Asianet Suvarna News Asianet Suvarna News

ಡೈಮಂಡ್‌ ಲೀಗ್ ಟೂರ್ನಿಯಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾಗೆ ಗಣ್ಯರಿಂದ ಅಭಿನಂದನೆಗಳ ಸುರಿಮಳೆ

ಡೈಮಂಡಲ್ ಲೀಗ್ ಟೂರ್ನಿಯಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ
89.08 ಮೀಟರ್‌ ದೂರ ಜಾವೆಲಿನ್ ಥ್ರೋ ಮಾಡಿದ ಚಿನ್ನದ ಹುಡುಗ
ನೀರಜ್ ಚೋಪ್ರಾ ಸಾಧನೆಗೆ ಅಭಿನಂದನೆಗಳ ಮಹಾಪೂರ

Neeraj Chopra Wins Diamond League Title Nitin Gadkari to Araga Jnanendra among congratulates Neeraj Chopra kvn
Author
First Published Aug 27, 2022, 12:57 PM IST

ಲಾಸನ್ನೆ(ಆ.27): ಟೋಕಿಯೋ ಒಲಿಂಪಿಕ್ಸ್‌ ಪದಕ ವಿಜೇತ ಜಾವೆಲಿನ್ ಥ್ರೋ ಪಟು, ಡೈಮಂಡ್ ಲೀಗ್ ಟೂರ್ನಿಯಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಈ ಸಾಧನೆಗೈದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೂ ನೀರಜ್ ಚೋಪ್ರಾ ಪಾತ್ರರಾಗಿದ್ದಾರೆ. ಇವರ ಈ ಸಾಧನೆಗೆ ನಾಡಿನ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. 

ಅಭಿನಂದನೆಗಳು ಚಾಂಪಿಯನ್ ನೀರಜ್ ಚೋಪ್ರಾ ಅವರು 89.08 ಮೀಟರ್‌ಗಳ ಅತ್ಯುತ್ತಮ ಎಸೆತದೊಂದಿಗೆ ಲಾಸನ್ನೆಯಲ್ಲಿ ಪ್ರತಿಷ್ಠಿತ #ಡೈಮಂಡ್‌ಲೀಗ್ ಮೀಟ್ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ, ಸಾಮಾಜಿಕ ಜಾಲತಾಣವಾದ ಕೂ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ

89.08ಮೀ.ಗಳ ಅತ್ಯುತ್ತಮ ಎಸೆತದೊಂದಿಗೆ ಲೌಸನ್ನೆ ಡೈಮಂಡ್ ಲೀಗ್ ಅನ್ನು ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರವಾದ ನೀರಜ್ ಛೋಪ್ರಾ ಅವರಿಗೆ ಅಭಿನಂದನೆಗಳು. ನಿಮ್ಮ ಈ ವಿಜಯದ ಓಟ ಮುಂದುವರಿಯಲಿ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಶುಭ ಕೋರಿದ್ದಾರೆ.

Neeraj Chopra Wins Diamond League Title Nitin Gadkari to Araga Jnanendra among congratulates Neeraj Chopra kvn

ಚಾಂಪಿಯನ್ ಆಟಗಾರನಿಂದ ಮತ್ತೊಮ್ಮೆ ಇತಿಹಾಸ ನಿರ್ಮಾಣ. ಒಲಿಂಪಿಕ್ಸ್‌ ಹೀರೋ ನೀರಜ್ ಚೋಪ್ರಾ, ಡೈಮಂಡ್ ಲೀಗ್ ಮೀಟ್‌ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎನಿಸಿಕೊಂಡಿದ್ದಾರೆ. ನಿಮ್ಮ ಸಾಧನೆಗೆ ಅಭಿನಂದನೆಗಳು ಹಾಗೂ ಕೋಟ್ಯಾಂತರ ಭಾರತೀಯರ ಶುಭ ಹಾರೈಕೆಗಳು ನಿಮ್ಮ ಜತೆಗಿರಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಶುಭ ಹಾರೈಸಿದ್ದಾರೆ. 

Neeraj Chopra Wins Diamond League Title Nitin Gadkari to Araga Jnanendra among congratulates Neeraj Chopra kvn

ಒಲಿಂಪಿಕ್ ಹೀರೋ #ನೀರಜ್ ಚೋಪ್ರಾ #ಲಾಸನ್ನೆ ಲೆಗ್ ಅನ್ನು ಗೆಲ್ಲುವ ಮೂಲಕ ಡೈಮಂಡ್‌ಲೀಗ್ ಮೀಟ್ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯರಾಗಿದ್ದಾರೆ. ಶತಕೋಟಿ ಹೃದಯದಿಂದ ಅಭಿನಂದನೆಗಳು ಮತ್ತು ಆಶೀರ್ವಾದಗಳು. ಇಡೀ ದೇಶವೇ ನಿಮ್ಮ ಬಗ್ಗೆ ಹೆಮ್ಮೆ ಪಡುತ್ತಿದೆ ಎಂದು ಬಿಬಿಎಂಪಿ ಕಾರ್ಪೊರೇಟರ್ ಮಂಜುನಾಥ್ ರಾಜು ಶುಭ ಹಾರೈಸಿದ್ದಾರೆ

ಏನಿದು ಡೈಮಂಡ್ ಲೀಗ್ ಟೂರ್ನಿ?

ಇದು ಪ್ರತಿಷ್ಠಿತ ಟೂರ್ನಿಗಳಲ್ಲಿ ಒಂದು ಎನಿಸಿದ್ದು, ಇದು ಸ್ಟಾಕ್‌ಹೋಮ್‌ನಲ್ಲಿ ಕಳೆದ ಜೂನ್ 30ರಂದು ಆರಂಭವಾಗಿತ್ತು. 2022ರಲ್ಲಿ ಒಟ್ಟು 13 ಡೈಮಂಡ್ ಲೀಗ್ ಟೂರ್ನಿಗಳು ನಡೆಯಲಿದ್ದು, ಈ ಪೈಕಿ 5 ಟೂರ್ನಿಗಳು ಪುರುಷರ ಜಾವೆಲಿನ್ ಥ್ರೋಗೆ ಸಂಬಂಧಿಸಿದವುಗಳಾಗಿವೆ. ಮೊದಲಿಗೆ ಮೇ ತಿಂಗಳಿನಲ್ಲಿ ದೋಹಾದಲ್ಲಿ ಮೊದಲ ಡೈಮಂಡ್ ಲೀಗ್ ನಡೆದಿತ್ತು, ಇದಾದ ಬಳಿಕ ಸ್ಟಾಕೋಹೋಮ್, ಸಿಲಿಸಿಯಾ, ಮೊನ್ಯಾಕೊ ಹಾಗೂ ಲಾಸನ್ನೆಯಲ್ಲಿ ಇನ್ನುಳಿದ ನಾಲ್ಕು ಡೈಮಂಡ್ ಲೀಗ್‌ಗಳು ನಡೆದಿದ್ದವು. 

Neeraj Chopra ಡೈಮಂಡ್‌ ಲೀಗ್‌ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ಬರೆದ ನೀರಜ್‌..!

ಡೈಮಂಡ್ಸ್‌ ಲೀಗ್ ಕ್ರೀಡಾಕೂಟದ ಲಾಸನ್ನೆ ಚರಣದ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಬರೋಬ್ಬರಿ 89.08 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕಕ್ಕೆ ಕೊರಳೊಡ್ಡುವಲ್ಲಿ ಯಶಸ್ವಿಯಾಗಿದ್ದಾರೆ. ಎರಡನೇ ಪ್ರಯತ್ನದಲ್ಲಿ 85.18 ಮೀಟರ್ ದೂರ ಎಸೆದಿದ್ದ ನೀರಜ್ ಚೋಪ್ರಾ, ಮೂರನೇ ಪ್ರಯತ್ನದಲ್ಲಿ 89.08 ಮೀಟರ್ ದೂರ ಎಸೆಯುವ ಮೂಲಕ ಚಿನ್ನದ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ. 

Follow Us:
Download App:
  • android
  • ios