ಕ್ರಿಕೆಟ್‌ನಿಂದ ಬಿಡುವು ಪಡೆದ ಸಮಯದಲ್ಲಿ ಮಾಜಿ ನಾಯಕ ಎಂ.ಎಸ್.ಧೋನಿ ಫುಟ್ಬಾಲ್ ಟೂರ್ನಿಯಲ್ಲಿ ಭಾಗವಹಿಸಿರೋದು ನೋಡಿದ್ದೇವೆ. ಇದೀಗ ಧೋನಿ ಟೆನಿಸ್ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ರಾಂಚಿ(ನ.28): ಬಿಡುವಿನ ಸಮಯವನ್ನು ಆನಂದಿಸುತ್ತಿರುವ ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಎಂ.ಎಸ್‌.ಧೋನಿ, ಇಲ್ಲಿನ ಸ್ಥಳೀಯ ಟೆನಿಸ್‌ ಟೂರ್ನಿಯೊಂದರಲ್ಲಿ ಪಾಲ್ಗೊಳ್ಳಲಿದ್ದಾರೆ. ಸೋಮವಾರದಿಂದ ಆರಂಭಗೊಂಡಿರುವ ಟೂರ್ನಿ ನ.30ಕ್ಕೆ ಅಂತ್ಯಗೊಳ್ಳಲಿದೆ. 

ಧೋನಿ ಬುಧವಾರ ಡಬಲ್ಸ್‌ ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ. ರಾಂಚಿಯ ನೆಚ್ಚಿನ ಕ್ರಿಕೆಟಿಗನ ಜತೆ ಆಡಲಿರುವ ಆಟಗಾರ ಯಾರು ಎನ್ನುವುದು ಬಹಿರಂಗಗೊಂಡಿಲ್ಲ. ರಾಂಚಿ ಫುಟ್ಬಾಲ್ ಕ್ಲಬ್ ಜೊತೆಗೆ ಫುಟ್ಬಾಲ್ ಆಡೋ ಎಂ.ಎಸ್.ಧೋನಿ ಇದೀಗ ಟೆನಿಸ್‌ನಲ್ಲೂ ಸೈ ಎನಿಸಿಕೊಂಡಿದ್ದಾರೆ.

View post on Instagram

ವೆಸ್ಟ್ ಇಂಡೀಸ್ ಹಾಗೂ ಆಸ್ಟ್ರೇಲಿಯಾ ವಿರುದ್ದದ ಟಿ20 ಸರಣಿಯಿಂದ ಹೊರಗುಳಿದಿದ್ದ ಎಂ.ಎಸ್.ಧೋನಿ ಇದೀಗ ವಿಶ್ರಾಂತಿಯಲ್ಲಿದ್ದಾರೆ. ಸದ್ಯ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 4 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಬಳಿಕ ಏಕದಿನ ಸರಣಿ ಆರಂಭವಾಗಲಿದೆ.