ತಮ್ಮ ಸ್ಫೂರ್ತಿದಾಯಕ ಮಾತುಗಳ ಮೂಲಕ ಯುವ ಸಮೂಹವನ್ನು ಜಾಗೃತಿಗೊಳಿಸಿದ್ದ ಸ್ವಾಮಿ ವಿವೇಕಾನಂದರು ತಮ್ಮ 39ನೇ ವಯಸ್ಸಿನಲ್ಲಿ ಅಂದರೆ ಜುಲೈ 4, 1902ರಲ್ಲಿ ಇಹಲೋಕ ತ್ಯಜಿಸಿದರು.
ಭಾರತ ಕಂಡ ಶ್ರೇಷ್ಠ ದಾರ್ಶನಿಕ, ಸಂತ, ವೀರ ಸನ್ಯಾಸಿ ಸ್ವಾಮಿ ವಿವೇಕಾನಂದ 115ನೇ ಪುಣ್ಯತಿಥಿಯನ್ನು ದೇಶದಾದ್ಯಂತ ಸ್ಮರಿಸಿಕೊಳ್ಳಲಾಗುತ್ತಿದೆ.
ಹಿಂದೂ ಧರ್ಮದ ಕಂದಾಚಾರವನ್ನು ತೊಡೆದುಹಾಕುವಲ್ಲಿ ಸ್ವಾಮಿ ವಿವೇಕಾನಂದ ಸಾಕಷ್ಟು ಶ್ರಮಿಸಿದ್ದರು. 1893ರಲ್ಲಿ ಅಮೇರಿಕಾದ ವಿಶ್ವಧರ್ಮ ಸಮ್ಮೇಳನದಲ್ಲಿ ಹಿಂದೂ ಧರ್ಮದ ಶ್ರೇಷ್ಠತೆಯನ್ನು ಇಡೀ ಜಗತ್ತಿನೆದುರು ಅನಾವರಣಗೊಳಿಸಿದ್ದರು.
ತಮ್ಮ ಸ್ಫೂರ್ತಿದಾಯಕ ಮಾತುಗಳ ಮೂಲಕ ಯುವ ಸಮೂಹವನ್ನು ಜಾಗೃತಿಗೊಳಿಸಿದ್ದ ಸ್ವಾಮಿ ವಿವೇಕಾನಂದರು ತಮ್ಮ 39ನೇ ವಯಸ್ಸಿನಲ್ಲಿ ಅಂದರೆ ಜುಲೈ 4, 1902ರಲ್ಲಿ ಇಹಲೋಕ ತ್ಯಜಿಸಿದರು.
ಖ್ಯಾತ ಮಾಜಿ ಕ್ರಿಕೇಟಿಗ ವಿರೇಂದ್ರ ಸೆಹ್ವಾಗ್, ಸ್ವಾಮಿ ವಿವೇಕಾನಂದರ ಪುಣ್ಯತಿಥಿಯ ಸಂದರ್ಭದಲ್ಲಿ ಅವರ 'ಏಳಿ, ಎದ್ದೇಳಿ, ಗುರಿ ಮುಟ್ಟುವವರೆಗೂ ನಿಲ್ಲದಿರಿ' ಎನ್ನುವ ಸಂದೇಶವನ್ನು ಟ್ವೀಟ್ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದ್ದಾರೆ.