ಸಚಿನ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 100ನೇ ಶತಕ ಸಿಡಿಸಿದ ವಿಶ್ವದ ಮೊದಲ ಹಾಗೂ ಏಕೈಕ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
ಮುಂಬೈ(ಮಾ.16): ಇಂದಿಗೆ ಸರಿಯಾಗಿ ಐದು ವರ್ಷಗಳ ಹಿಂದೆ ಅಂದರೆ ಮಾ.16 2012ರಂದು ಭಾರತ ತಂಡದ ಸ್ಟಾರ್ ಬ್ಯಾಟ್ಸ್ಮನ್ ಸಚಿನ್ ತೆಂಡೂಲ್ಕರ್, ಕ್ರಿಕೆಟ್ನಲ್ಲಿ ಶತಕಗಳ ಶತಕ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು.
ಬಾಂಗ್ಲಾದೇಶದ ಶೇರ್ ಎ ಬಾಂಗ್ಲಾ ಕ್ರೀಡಾಂಗಣದಲ್ಲಿ ನಡೆದಿದ್ದ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಸಚಿನ್ ಶತಕ ದಾಖಲಿಸಿದ್ದರು. ಈ ಮೂಲಕ ಸಚಿನ್ ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ 100ನೇ ಶತಕ ಸಿಡಿಸಿದ ವಿಶ್ವದ ಮೊದಲ ಹಾಗೂ ಏಕೈಕ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
2011ರ ವಿಶ್ವಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಾಗ್ಪುರ ಮೈದಾನದಲ್ಲಿ ಸಚಿನ್ 111ರನ್ಗಳಿಸಿದ್ದರು. ಇದು ಸಚಿನ್ ಅವರು ತಮ್ಮ ವೃತ್ತಿ ಜೀವನದಲ್ಲಿ ದಾಖಲಿಸಿದ 99ನೇ ಶತಕವಾಗಿತ್ತು. ಇದಾದ ಸುಮಾರು 369 ದಿನಗಳ ಬಳಿಕ ಸಚಿನ್ ನೂರು ಶತಕಗಳ ದಾಖಲೆಯನ್ನು ನಿರ್ಮಿಸಿದರು.
