ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಇಂಗ್ಲೀಷ್ ವರ್ಣಮಾಲೆಯಲ್ಲೇ ವಿನೂತನವಾಗಿ ಯುವಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ನಿಮ್ಮ ಹೋರಾಟ ಸಾಕಷ್ಟು ಮಂದಿಗೆ ಸ್ಫೂರ್ತಿದಾಯಕವಾಗಿದೆ ಎಂದು ವೀರೂ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು(ಡಿ.12): ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ಯುವರಾಜ್ ಸಿಂಗ್ 36ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಯುವಿಗೆ ಸ್ನೇಹಿತರು, ಅಭಿಮಾನಿಗಳು, ಟೀಂ ಇಂಡಿಯಾ ದಿಗ್ಗಜರು ವಿನೂತನವಾಗಿ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರುತ್ತಿದ್ದಾರೆ.
ಇನ್ನು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಇಂಗ್ಲೀಷ್ ವರ್ಣಮಾಲೆಯಲ್ಲೇ ವಿನೂತನವಾಗಿ ಯುವಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ನಿಮ್ಮ ಹೋರಾಟ ಸಾಕಷ್ಟು ಮಂದಿಗೆ ಸ್ಫೂರ್ತಿದಾಯಕವಾಗಿದೆ ಎಂದು ವೀರೂ ಟ್ವೀಟ್ ಮಾಡಿದ್ದಾರೆ.
ಸೆಹ್ವಾಗ್ ಮಾತ್ರವಲ್ಲದೇ ಯುವಿಯ ಜೊತೆಯಾಟಗಾರರು ಕೂಡಾ ಸಿಕ್ಸರ್ ಕಿಂಗ್'ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
17 ವರ್ಷಗಳ ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ ಎಡಗೈ ಬ್ಯಾಟ್ಸ್'ಮನ್ ಯುವರಾಜ್ ಸಿಂಗ್ 40 ಟೆಸ್ಟ್, 304 ಏಕದಿನ ಹಾಗೂ 58 ಟಿ20 ಪಂದ್ಯಗಳನ್ನಾಡಿದ್ದು ಕ್ರಮವಾಗಿ 1900, 8701 ಮತ್ತು 1177 ರನ್ ಬಾರಿಸಿದ್ದಾರೆ.
