ಮಹತ್ವದ ಪಂದ್ಯದಲ್ಲಿ ಮತ್ತೊಮ್ಮೆ ಹಿಟ್’ಮ್ಯಾನ್ ಫೇಲ್..! ಇದೇನು ಮೊದಲಲ್ಲ..!
Feb 1, 2019, 4:29 PM IST
ಟೀಂ ಇಂಡಿಯಾದ ಸ್ಫೋಟಕ ಆರಂಭಿಕ ಬ್ಯಾಟ್ಸ್’ಮನ್ ರೋಹಿತ್ ಶರ್ಮಾ ಮತ್ತೊಮ್ಮೆ ಮೈಲುಗಲ್ಲಿನ ಪಂದ್ಯದಲ್ಲಿ ನಿರಾಸೆ ಅನುಭವಿಸಿದ್ದಾರೆ. ಡಬಲ್ ಸೆಂಚುರಿ ಕಿಂಗ್ ರೋಹಿತ್ ತಮ್ಮ 200ನೇ ಪಂದ್ಯವನ್ನು ಸ್ಮರಣೀಯವಾಗಿಸಿಕೊಳ್ಳುವಲ್ಲಿ ಎಡವಿದ್ದಾರೆ.
ಟೀಂ ಇಂಡಿಯಾ ಪರ ಜಂಟಿ ಗರಿಷ್ಠ ಸಿಕ್ಸರ್ ಸಿಡಿಸಿದ ಸಾಧನೆ ಮಾಡಿರುವ ರೋಹಿತ್ ಮೈಲಿಗಲ್ಲಿನ ಪಂದ್ಯದಲ್ಲಿ ಕಮಾಲ್ ಮಾಡಲು ಎಡವಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ತಮ್ಮ ವೃತ್ತಿಜೀವನದ ಇನ್ನೂರನೇ ಪಂದ್ಯವಾಡಿದ ರೋಹಿತ್ ಶರ್ಮಾ ಕೇವಲ 7 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಮಹತ್ವದ ಮೈಲಿಗಲ್ಲಿನ ಪಂದ್ಯದಲ್ಲಿ ರೋಹಿತ್ ಎಡವುತ್ತಿರುವುದು ಇದೇ ಮೊದಲೇನಲ್ಲ, ಈ ಹಿಂದೆಯೂ ರೋಹಿತ್ ನಿರಾಸೆ ಅನುಭವಿಸಿದ್ದಾರೆ.