ಈ ಮೂಲಕ ಜಮ್ಮು-ಕಾಶ್ಮೀರದ ವಿವಿಧ ಭಾಗಗಳಲ್ಲಿ ಗಡಿ ನುಸುಳುವ ಪ್ರಕರಣಗಳಲ್ಲಿ ಸೇನೆ ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಹತ್ಯೆಗೀಡಾದ ಉಗ್ರರ ಸಂಖ್ಯೆ 14ಕ್ಕೇರಿದೆ.
ಶ್ರೀನಗರ(ಜೂ.10): ಭಾರತದ ಗಡಿ ನುಸುಳಲು ಯತ್ನಿಸಿದ ಮತ್ತೋರ್ವ ಉಗ್ರನನ್ನು ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನಾ ಪಡೆ ಹೊಡೆದುರುಳಿಸಿದೆ.
ಭಾರತದೊಳಕ್ಕೆ ಅಕ್ರಮವಾಗಿ ನುಸುಳಲು ಮುಂದಾಗಿದ್ದ ಐವರು ಉಗ್ರರನ್ನು ನಿನ್ನೆಯಷ್ಟೇ ಭಾರತದ ಸೇನೆ ಸದೆಬಡಿದಿತ್ತು. ಇಂದೂ ಸಹ ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೇಜ್ ಸೆಕ್ಟರ್ ಬಳಿಯ ಗಡಿ ನಿಯಂತ್ರಣ ರೇಖೆಯಲ್ಲಿ ನುಸುಳಲು ಯತ್ನಿಸಿದ ಉಗ್ರನನ್ನು ಸೇನೆ ಹತ್ಯೆ ಮಾಡಿದೆ.
ಈ ಮೂಲಕ ಜಮ್ಮು-ಕಾಶ್ಮೀರದ ವಿವಿಧ ಭಾಗಗಳಲ್ಲಿ ಗಡಿ ನುಸುಳುವ ಪ್ರಕರಣಗಳಲ್ಲಿ ಸೇನೆ ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಹತ್ಯೆಗೀಡಾದ ಉಗ್ರರ ಸಂಖ್ಯೆ 14ಕ್ಕೇರಿದೆ. ಈ ಕಾರ್ಯಾಚರಣೆಗಳಲ್ಲಿ ಓರ್ವ ಸೈನಿಕ ಹುತಾತ್ಮರಾಗಿದ್ದಾರೆ.
ಕದನವಿರಾಮ ಉಲ್ಲಂಘನೆ:
ಈ ನಡುವೆ, ಪಾಕಿಸ್ತಾನವು ಇಂದೂ ರಾತ್ರಿ ಪೂಂಛ್'ನಲ್ಲಿ ಕದನವಿರಾಮ ಉಲ್ಲಂಘಿಸಿ ದಾಳಿ ನಡೆಸಿದೆ. ಭಾರತೀಯ ಪಡೆಗಳೂ ದಿಟ್ಟ ಉತ್ತರ ನೀಡಿದ್ದು, ಗುಂಡಿನ ಚಕಮಕಿ ಮುಂದುವರೆದಿದೆ.
