ಇಸ್ಲಾಮಾಬಾದ್(ಆ.03): ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಏಕಾಂಗಿ ಹೋರಾಟ ನೀಡಿ ಸೆಂಚುರಿ ಸಿಡಿಸಿದ ವಿರಾಟ್ ಕೊಹ್ಲಿಗೆ ದಿಗ್ಗಜ ಕ್ರಿಕೆಟಿಗರು, ಮಾಜಿ ಕ್ರಿಕೆಟಿಗರು ಸೇರಿದಂತೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೀಗ ಕೊಹ್ಲಿ ಅದ್ಬುತ ಪ್ರದರ್ಶನಕ್ಕೆ ಪಾಕಿಸ್ತಾನ ಮಾಜಿ ವೇಗಿ ಶೋಯಿಬ್ ಅಕ್ತರ್ ಕ್ಲೀನ್ ಬೋಲ್ಡ್ ಆಗಿದ್ದಾರೆ.

ವಿರಾಟ್ ಕೊಹ್ಲಿಯ ಈ ಪ್ರದರ್ಶನಕ್ಕೆ ಶೋಯಿಬ್ ಅಕ್ತರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ವಿರಾಟ್ ಕೊಹ್ಲಿ ವಿಶ್ವದ ಎಲ್ಲಾ ಬ್ಯಾಟ್ಸ್‌ಮನ್‌ಗಳಿಗೆ ದಾರಿ ದೀಪವಾಗಿದ್ದಾರೆ. ಕೊಹ್ಲಿ ಕಠಿಣ ಅಭ್ಯಾಸ, ಶ್ರದ್ಧೆ ಹಾಗೂ ಆತ್ಮವಿಶ್ವಾಸದ ಮೂಲಕ ಎಲ್ಲಾ ಟೀಕೆಗಳಿಗೆ ಉತ್ತರಿಸಿದ್ದಾರೆ ಎಂದು ಶೋಯಿಬ್ ಟ್ವೀಟ್ ಮಾಡಿದ್ದಾರೆ.

 

 

2014ರ ಇಂಗ್ಲೆಂಡ್ ಪ್ರವಾಸದಲ್ಲಿ ವಿರಾಟ್ ಕೊಹ್ಲಿ ಕಳಪೆ ಪ್ರದರ್ಶನ ನೀಡಿದ್ದರು. ಆದರೆ ಇದನ್ನೇ ಟೀಕಿಸುವವರಿಗೆ ವಿರಾಟ್ ಕೊಹ್ಲಿ ತಕ್ಕ ಉತ್ತರ ನೀಡಿದ್ದಾರೆ. ತಂಡದ ಜವಾಬ್ದಾರಿಯನ್ನ ಹೆಗಲ ಮೇಲೆ ಹೊತ್ತು, ಬ್ಯಾಟಿಂಗ್ ಪ್ರದರ್ಶನ ನೀಡಿದ ಕೊಹ್ಲಿ ಶತಕ ಬಾರಿಸಿ ತಂಡವನ್ನ ಅಪಾಯದಿಂದ ಪಾರುಮಾಡಿದ್ದರು.