ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ಎದುರು ಹೀನಾಯ ಸೋಲುಂಡ ಪಾಕಿಸ್ತಾನ ಏಕದಿನ ಸರಣಿಯಲ್ಲಾದರೂ ಪ್ರಭಾವಿ ಪ್ರದರ್ಶನದ ವಿಶ್ವಾಸದಲ್ಲಿದೆ.

ಕರಾಚಿ(ಜ.08): ಇದೇ ಶುಕ್ರವಾರದಿಂದ ಆರಂಭವಾಗುವ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಗಾಗಿ ಪಾಕಿಸ್ತಾನ ತಂಡ ಆಲ್ರೌಂಡರ್ ಮೊಹಮ್ಮದ್ ಹಫೀಜ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲು ನಿರ್ಧರಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹಫೀಜ್ ಬೌಲಿಂಗ್ ಶೈಲಿ ಕ್ರಿಕೆಟ್ ನಿಯಮವನ್ನು ಉಲ್ಲಂಘಿಸಿಲ್ಲ ಎಂದು ಐಸಿಸಿ ಸ್ಪಷ್ಟಪಡಿಸಿದ ಬಳಿಕ ಪಾಕಿಸ್ತಾನ ಈ ನಿರ್ಧಾರಕ್ಕೆ ಬಂದಿದೆ. ಹಫೀಜ್ 12 ತಿಂಗಳುಗಳ ಕಾಲ ಬೌಲಿಂಗ್ ಮಾಡದಂತೆ ಐಸಿಸಿ ನಿಷೇಧ ಹೇರಿತ್ತು.

ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಆಡಲು ಬೌಲಿಂಗ್ ಪರೀಕ್ಷೆಗೊಳಗಾಗಿ ವಿಫಲರಾಗಿದ್ದರು. ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ಎದುರು ಹೀನಾಯ ಸೋಲುಂಡ ಪಾಕಿಸ್ತಾನ ಏಕದಿನ ಸರಣಿಯಲ್ಲಾದರೂ ಪ್ರಭಾವಿ ಪ್ರದರ್ಶನದ ವಿಶ್ವಾಸದಲ್ಲಿದೆ.