ಪುಲ್ವಾಮಾ ದಾಳಿಯ ಬಳಿಕ ಭಾರತ ತಂಡವು ವಿಶ್ವಕಪ್’ನಲ್ಲಿ ಪಾಕ್ ವಿರುದ್ಧ ಕ್ರಿಕೆಟ್ ಆಡಬಾರದು ಎನ್ನುವ ಕೂಗು ಜೋರಾಗುತ್ತಿದೆ. ಇದರ ಬೆನ್ನಲ್ಲೇ ಸುಪ್ರೀಂಕೋರ್ಟ್ ನೇಮಿತ ಬಿಸಿಸಿಐನ ಆಡಳಿತ ಸಮಿತಿ ಮುಖ್ಯಸ್ಥ ವಿನೋದ್ ರಾಯ್, ವರ್ಣಭೇದ ನೀತಿ ಅನುಸರಿಸಿದ ಕಾರಣ ಯಾವ ರೀತಿ ದಕ್ಷಿಣ ಆಫ್ರಿಕಾವನ್ನು ಬಹಿಷ್ಕರಿಸಲಾಗಿತ್ತೋ ಅದೇ ರೀತಿ ಭಯೋತ್ಪಾದನಾ ಚಟುವಟಿಕೆಗಳಿಗೆ ಬೆನ್ನೆಲುಬಾಗಿರುವ ಪಾಕಿಸ್ತಾನವನ್ನು ಬಹಿಷ್ಕರಿಸಬೇಕೆಂದು ಒತ್ತಾಯಿಸಿದ್ದಾರೆ.
ನವದೆಹಲಿ: ಭಯೋತ್ಪಾದನಾ ಚುಟವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನ ವಿರುದ್ಧದ ವಾಗ್ದಾಳಿಯನ್ನು ಸುಪ್ರೀಂಕೋರ್ಟ್ ನೇಮಿತ ಬಿಸಿಸಿಐನ ಆಡಳಿತ ಸಮಿತಿ ಮುಖ್ಯಸ್ಥ ವಿನೋದ್ ರಾಯ್ ಮುಂದುವರೆಸಿದ್ದು, ಪಾಕಿಸ್ತಾನಕ್ಕೆ ಕ್ರೀಡಾ ಜಗತ್ತಿನಿಂದಲೇ ಬಹಿಷ್ಕಾರ ಹಾಕಬೇಕೆಂದು ಆಗ್ರಹಿಸಿದ್ದಾರೆ.
ಆಟಗಾರರ ಸುರಕ್ಷತೆಯೇ ಮೊದಲ ಆದ್ಯತೆ: ಐಸಿಸಿ
ವರ್ಣಭೇದ ನೀತಿ ಅನುಸರಿಸಿದ ಕಾರಣ ಯಾವ ರೀತಿ ದಕ್ಷಿಣ ಆಫ್ರಿಕಾವನ್ನು ಬಹಿಷ್ಕರಿಸಲಾಗಿತ್ತೋ ಅದೇ ರೀತಿ ಭಯೋತ್ಪಾದನಾ ಚಟುವಟಿಕೆಗಳಿಗೆ ಬೆನ್ನೆಲುಬಾಗಿರುವ ಪಾಕಿಸ್ತಾನವನ್ನು ಬಹಿಷ್ಕರಿಸಬೇಕೆಂದು ವಿನೋದ್ ರಾಯ್ ಒತ್ತಾಯಿಸಿದ್ದಾರೆ. ಕೇವಲ ಒಂದು ಅಥವಾ ಎರಡು ಪಂದ್ಯಗಳನ್ನು ಬಹಿಷ್ಕರಿಸುವುದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಈ ರೀತಿಯ ಭಯೋತ್ಪಾದನ ಕೃತ್ಯಗಳಿಗೆ ಬೆಂಬಲ
ನೀಡುವ ರಾಷ್ಟ್ರಗಳನ್ನು ಶಾಶತ್ವವಾಗಿ ಕ್ರೀಡಾ ಚಟುವಟಿಕೆಗಳಿಂದ ಸಂಪೂರ್ಣವಾಗಿ ದೂರವಿರಿಸಬೇಕು. ಇದೇ ನಮ್ಮ ಉದ್ದೇಶವಾಗಿದೆ. ಇದಕ್ಕೆ ಇತರೆ ರಾಷ್ಟ್ರಗಳು ತಮ್ಮ ಬೆಂಬಲ ಸೂಚಿಸುವ ಮೂಲಕ ದುಷ್ಟರಿಗೆ ಪಾಠ ಕಲಿಸಲು ಮುಂದಾಗಬೇಕೆಂದು ರಾಯ್ ಒತ್ತಾಯಿಸಿದ್ದಾರೆ.
ವಿಶ್ವಕಪ್ 2019: ಬದ್ಧವೈರಿ ಪಾಕ್‌ಗೆ 2 ಅಂಕ ನೀಡಲು ಇಷ್ಟಪಡೋದಿಲ್ಲ - ಸಚಿನ್
‘ವರ್ಣಭೇದ ನೀತಿ ಅನುಸರಿಸಿದ ಕಾರಣ 1970ರಿಂದ 1991ರವರೆಗೂ ದಕ್ಷಿಣ ಆಫ್ರಿಕಾವನ್ನು ಕ್ರೀಡಾ ಚಟುವಟಿಕೆಗಳಿಂದ ಬಹಿಷ್ಕರಿಸಲಾಗಿತ್ತು. ಪಾಕ್ ವಿಚಾರದಲ್ಲೂ ಇದೇ ಮಾದರಿಯಲ್ಲಿ ಕಠಿಣ ನಿರ್ಧಾರ ಕೈಗೊಳ್ಳಬೇಕಿದೆ’ ಎಂದಿದ್ದಾರೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Feb 25, 2019, 2:13 PM IST