ಹರಾಜು ಪ್ರಕ್ರಿಯೆ ಆರಂಭಕ್ಕೂ ಮೊದಲು ಕೇಂದ್ರ ಕ್ರೀಡಾ ಸಚಿವ ವಿಜಯ್ ಗೋಯಲ್ ಪಾಕಿಸ್ತಾನದ ಆಟಗಾರರಿಗೆ ವೀಸಾ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ನವದೆಹಲಿ(ಮೇ.23): ಐದನೇ ಆವೃತ್ತಿಯ ಪ್ರೊ ಕಬ್ಬಡಿ ಪಂದ್ಯಾವಳಿಯ ಹರಾಜಿನ ಪ್ರಕ್ರಿಯೆಯಲ್ಲಿ ಪಾಕಿಸ್ತಾನದ ಆಟಗಾರರಿಗೂ ಭಾಗವಹಿಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಯಾವೊಬ್ಬ ಫ್ರಾಂಚೈಸಿಯು ಪಾಕ್ ಆಟಗಾರರನ್ನು ಖರೀಧಿಸಲು ಮನಸ್ಸು ಮಾಡಲಿಲ್ಲ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹರಾಜು ಪ್ರಕ್ರಿಯೆ ಆರಂಭಕ್ಕೂ ಮೊದಲು ಕೇಂದ್ರ ಕ್ರೀಡಾ ಸಚಿವ ವಿಜಯ್ ಗೋಯಲ್ ಪಾಕಿಸ್ತಾನದ ಆಟಗಾರರಿಗೆ ವೀಸಾ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಪ್ರೊ ಆಯೋಜಕರಾದ ಚಾರು ಶರ್ಮಾ, ಪಾಕ್ ಆಟಗಾರರು ವಿಶ್ವಶ್ರೇಷ್ಟ ಆಟಗಾರರ ಸಾಲಿನಲ್ಲಿದ್ದಾರೆ. ವಿಶ್ವಶ್ರೇಷ್ಠ ಲೀಗ್'ನಲ್ಲಿ ಅವರಿಗೂ ಅವಕಾಶ ಸಿಗಬೇಕು ಎನ್ನುವುದು ನಮ್ಮ ಉದ್ದೇಶ, ಆದರೆ ಸರ್ಕಾರದ ನಿರ್ಧಾರವನ್ನು ನಾವು ಗೌರವಿಸುತ್ತೇವೆ ಎಂದರು.