Published : Apr 14 2017, 03:00 AM IST| Updated : Apr 11 2018, 12:54 PM IST
Share this Article
FB
TW
Linkdin
Whatsapp
ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್‌ ತಂಡಗಳ ನಡುವೆ ಐಪಿಎಲ್‌ ಟಿ-20 ಪಂದ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ರಾತ್ರಿ 8.30ರ ತನಕ ವಾಹನ ನಿಲುಗಡೆ ನಿಷೇಧಿಸಲಾಗಿದೆ
ಬೆಂಗಳೂರು(ಏ.14): ಸೇಂಟ್ ಜೋಸೆಫ್ ಯೂರೋಪಿಯನ್ ಬಾಲಕರ ಶಾಲಾ ಮೈದಾನ, ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನ, ಕಂಠೀರವ ಕ್ರೀಡಾಂಗಣ, ಬೌರಿಂಗ್ ಇನ್ಸ್ಟಿಟ್ಯೂಟ್ ಮತ್ತು ಬಿ.ಆರ್.ವಿ.ಮೈದಾನದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿ, ಕೆಎಸ್ಸಿಎ ಸದಸ್ಯರ ವಾಹನಗಳನ್ನು ಸೆಂಟ್ ಮಾರ್ಕ್ಸ್ ಕ್ಯಾಥಡ್ರೆಲ್ ಚಚ್ರ್ ಬಳಿ, ಅತಿಗಣ್ಯ ವ್ಯಕ್ತಿಗಳ ವಾಹನಗಳನ್ನು ಯುಬಿ ಸಿಟಿ ಪೇ ಆಂಡ್ ಪಾರ್ಕಿಂಗ್ ಸ್ಥಳದಲ್ಲಿ ವ್ಯವಸ್ಥೆ ಮಾಡಲಾಗಿದೆ. ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ಆರ್ಸಿಬಿ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ಐಪಿಎಲ್ ಟಿ-20 ಪಂದ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ರಾತ್ರಿ 8.30ರ ತನಕ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಪಂದ್ಯ ವೀಕ್ಷಿಸಲು ಬರುವ ಪ್ರೇಕ್ಷಕರು ಸಂಚಾರ ದಟ್ಟಣೆ ತಪ್ಪಿಸಲು ಬಿಎಂಟಿಸಿ ಮತ್ತು ಮೆಟ್ರೋ ಸೇವೆ ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಇಲ್ಲಿವಾಹನ ನಿಲುಗಡೆ ಬೇಡ: ಕ್ವೀನ್ಸ್ ರಸ್ತೆಯಲ್ಲಿ, ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ, ಎಂ.ಜಿ. ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ರಸ್ತೆಯ ಎರಡು ಕಡೆ, ರಾಜಭವನ ರಸ್ತೆ, ಟಿ. ಚೌಡಯ್ಯ ರಸ್ತೆ ಮತ್ತು ರೇಸ್ಕೋರ್ಸ್ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ ಎರಡು ಕಡೆ, ಕಬ್ಬನ್ ರಸ್ತೆಯಲ್ಲಿ ಕಾಮರಾಜ ರಸ್ತೆ ಜಂಕ್ಷನ್ನಿಂದ ಡಿಕೆನ್ಸನ್ ರಸ್ತೆ ಜಂಕ್ಷನ್ವರೆಗೆ ಬಿಎಂಟಿಸಿ ಬಸ್ಗಳನ್ನು ಹೊರತುಪಡಿಸಿ ಇತರೆ ಎಲ್ಲಾ ತರಹದ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ. ಸೇಂಟ್ ಮಾರ್ಕ್ಸ್ ರಸ್ತೆಯಲ್ಲಿ ಎಸ್ಬಿಐ ವೃತ್ತದಿಂದ ಆಶೀರ್ವಾದಂ ವೃತ್ತದವರೆಗೆ, ಮ್ಯೂಸಿಯಂ ರಸ್ತೆಯಲ್ಲಿ, ಎಂ.ಜಿ. ರಸ್ತೆಯಿಂದ ಸೇಂಟ್ ಮಾರ್ಕ್ಸ್ ರಸ್ತೆವರೆಗೆ ಹಾಗೂ ರೆಸಿಡೆನ್ಸಿ ರಸ್ತೆವರೆಗೆ, ಕಸ್ತೂರ ಬಾ ರಸ್ತೆಯಲ್ಲಿ, ಕ್ವೀನ್ಸ್ವೃತ್ತದಿಂದ ಹಡ್ಸನ್ ವೃತ್ತದವರೆಗೆ ಹಾಗೂ ಮಲ್ಯ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್.ವೃತ್ತದವರೆಗೆ, ಕಬ್ಬನ್ಪಾರ್ಕ್ ಒಳಭಾಗದ ಕಿಂಗ್ ರಸ್ತೆ, ಪ್ರೆಸ್ಕ್ಲಬ್ ಮುಂಭಾಗ, ಬಾಲಭವನ ಫೌಂಟೇನ್ ರಸ್ತೆಯಲ್ಲಿ, ಲ್ಯಾವೆಲ್ಲೆ ರಸ್ತೆಯಲ್ಲಿ ಗ್ರಾಂಟ್ ಜಂಕ್ಷನ್ವರೆಗಿನ ರಸ್ತೆಗಳಲ್ಲಿ ಹಾಗೂ ಸಿದ್ದಲಿಂಗಯ್ಯ ವೃತ್ತದಿಂದ ವಿಠಲ ಮಲ್ಯರಸ್ತೆಯಲ್ಲಿ, ಬಿಷಪ್ ಕಾಟನ್ ಬಾಲಕಿಯರ ಶಾಲೆಯವರೆಗೆ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.