14ನೇ ಆವೃತ್ತಿಯ ಏಷ್ಯಾಕಪ್ ಟೂರ್ನಿಯು 2018ರ ಸೆಪ್ಟೆಂಬರ್ 15ರಿಂದ 30ರವರೆಗೆ ಭಾರತದಲ್ಲಿ ನಡೆಯಲಿದೆ.
ಕರಾಚಿ(ಡಿ.28): ಬಿಸಿಸಿಐ ಹಾಗೂ ಪಾಕಿಸ್ತಾನ ಕ್ರಿಕೆಟ್ ಮಂಡಳಿ ನಡುವಿನ ಸಮರ ಮತ್ತೊಂದು ಹೆಜ್ಜೆ ಮುಂದಕ್ಕೆ ಹೋದಂತಿದೆ.
ಮುಂದಿನ ವರ್ಷ ಸೆಪ್ಟೆಂಬರ್ ವೇಳೆ ಭಾರತದಲ್ಲಿ ನಡೆಯಲಿರುವ ಏಷ್ಯಾ ಕಪ್ ಟೂರ್ನಿಯನ್ನು ಬಹಿಷ್ಕರಿಸುವ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಎಚ್ಚರಿಕೆ ನೀಡಿದೆ.
2018ರಲ್ಲಿ ನಡೆಯಲಿರುವ ಉದಯೋನ್ಮುಖ ತಂಡಗಳ ಏಷ್ಯಾ ಕಪ್ ಪಂದ್ಯಾವಳಿಗೆ ಪಾಕ್ ಆತಿಥ್ಯ ವಹಿಸುವುದಕ್ಕೆ ಭಾರತ, ಬಾಂಗ್ಲಾ ವಿರೋಧ ವ್ಯಕ್ತಪಡಿಸಿದ್ದವು ಇದಕ್ಕೆ ಪಾಕ್ ಆಕ್ಷೇಪಿಸಿತ್ತು.
2014ರಲ್ಲಿ ಬಿಸಿಸಿಐ ಹಾಗೂ ಪಿಸಿಬಿ ನಡುವೆ ದ್ವಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು. ಇದರಂತೆ 2015ರಿಂದ 2023ರ ವರೆಗೆ 6 ದ್ವಿಪಕ್ಷೀಯ ಸರಣಿಗಳನ್ನು ಆಡಬೇಕಿತ್ತು. ಆದರೆ ಕೇಂದ್ರ ಸರ್ಕಾರ ಅನುಮತಿ ನೀಡದ ಹಿನ್ನಲೆಯಲ್ಲಿ ಬಿಸಿಸಿಐ ಈ ಒಪ್ಪಂದದಿಂದ ಹಿಂದೆ ಸರಿದಿದ್ದರಿಂದ ಪಿಸಿಬಿ ಸಾಕಷ್ಟು ನಷ್ಟ ಅನುಭವಿಸಿರುವುದಾಗಿ ಹೇಳಿಕೊಂಡಿತ್ತು.
14ನೇ ಆವೃತ್ತಿಯ ಏಷ್ಯಾಕಪ್ ಟೂರ್ನಿಯು 2018ರ ಸೆಪ್ಟೆಂಬರ್ 15ರಿಂದ 30ರವರೆಗೆ ಭಾರತದಲ್ಲಿ ನಡೆಯಲಿದೆ.
