Asianet Suvarna News Asianet Suvarna News

ನಿಮ್ಮೆಲ್ಲರ ಪರಿಶ್ರಮದಿಂದ ಸ್ಪೂರ್ತಿದಾಯಕ ಸಾಧನೆ ಮಾಡಿದ್ದೀರ: ಕಾಮನ್‌ವೆಲ್ತ್ ಸಾಧಕರಿಗೆ ಮೋದಿ ಶಹಬ್ಬಾಶ್

ಕಾಮನ್‌ವೆಲ್ತ್ ಗೇಮ್ಸ್‌ ಸಾಧಕರೊಂದಿಗೆ ಸಮಾಲೋಚನೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ 22 ಚಿನ್ನ, 15 ಬೆಳ್ಳಿ ಹಾಗೂ 23 ಕಂಚಿನ ಪದಕ ಗೆದ್ದ ಭಾರತ
ಭಾರತೀಯ ಕ್ರೀಡಾಪಟುಗಳ ಸಾಧನೆ ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ

PM Narendra Modi meets India Commonwealth Games 2022 contingent at his residence price Indian Athletes Achievements kvn
Author
Bengaluru, First Published Aug 13, 2022, 1:20 PM IST

ನವದೆಹಲಿ(ಆ.13): ಕಠಿಣ ಪರಿಶ್ರಮದಿಂದಾಗಿ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ಜಯಿಸಿದ ಸಾಧಕರಿಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ನಿವಾಸದಲ್ಲಿ ಕ್ರೀಡಾಪಟುಗಳನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ಕಳೆದ ಎರಡು ವಾರಗಳಲ್ಲಿ ಕ್ರೀಡಾ ವಿಭಾಗದಲ್ಲಿ ಎರಡು ದೊಡ್ಡ ಸಾಧನೆ ಮಾಡಲಾಗಿದೆ. ಒಂದು ಕಡೆ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಭಾರತ ಉತ್ತಮ ಪ್ರದರ್ಶನ ತೋರಿದರೇ, ಮತ್ತೊಂದು ಕಡೆ ಮೊದಲ ಬಾರಿಗೆ ಭಾರತ ಚೆಸ್ ಒಲಿಂಪಿಯಾಡ್ ಆಯೋಜಿಸಿ ಸೈ ಎನಿಸಿಕೊಂಡಿದೆ. ಭಾರತ ಚೆಸ್ ಒಲಿಂಪಿಯಾಡ್ ನಡೆಸಿ ಯಶಸ್ವಿಯಾಗಿದ್ದು ಮಾತ್ರವಲ್ಲ, ಅತ್ಯುತ್ತಮ ಪ್ರದರ್ಶನವನ್ನೂ ತೋರಿದೆ. ಚೆಸ್ ಒಲಿಂಪಿಯಾಡ್‌ನಲ್ಲಿ ಪಾಲ್ಗೊಂಡ ಎಲ್ಲಾ ಸ್ಪರ್ಧಾಳುಗಳಿಗೂ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆಂದು ಪ್ರಧಾನಿ ಮೋದಿ ಹೇಳಿದ್ದಾರೆ.  

ಬರ್ಮಿಂಗ್‌ಹ್ಯಾಮ್‌ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಸಾಧನೆ ಮಾಡಿದ ಭಾರತೀಯ ಕ್ರೀಡಾಪಟುಗಳನ್ನು ಇಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿ ಮಾತನಾಡಿದ ಅವರು,  ನೀವೆಲ್ಲರೂ ನಿಮ್ಮ ಬಿಡುವಿರದ ಕೆಲಸವನ್ನು ಬಿಟ್ಟು ನನ್ನನ್ನು ನನ್ನ ನಿವಾಸದಲ್ಲಿ ಭೇಟಿಯಾಗಲು ಬಂದಿರುವುದಕ್ಕೆ ನಾನು ಆಭಾರಿಯಾಗಿದ್ದೇನೆ. ಎಲ್ಲಾ ಭಾರತೀಯರ ಜತೆ ಮಾತನಾಡಿದಂತೆ ನಿಮ್ಮ ಜತೆಗೂ ಮಾತನಾಡುತ್ತಿರುವುದಕ್ಕೆ ನನಗೆ ಸಂತೋಷವಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.  ಇನ್ನೆರಡು ದಿನಗಳಲ್ಲಿ ನಮ್ಮ ದೇಶವು ಸ್ವಾತಂತ್ರ್ಯಗೊಂಡ 75 ವರ್ಷ ಪೂರೈಸಲಿದೆ. ನಿಮ್ಮೆಲ್ಲರ ಪರಿಶ್ರಮದಿಂದ ಸ್ಪೂರ್ತಿದಾಯಕ ಸಾಧನೆಯೊಂದಿಗೆ ದೇಶವು ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಕಾಲಿಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಸಂಪೂರ್ಣ ಮಾತುಕತೆ ಹೀಗಿದೆ ನೋಡಿ

ಬರ್ಮಿಂಗ್‌ಹ್ಯಾಮ್‌ ಕಾಮನ್‌ವೆಲ್ತ್‌ ಗೇಮ್ಸ್‌ ಕ್ರೀಡಾಕೂಟದಲ್ಲಿ ಭಾರತವು 22 ಚಿನ್ನಮ 15 ಬೆಳ್ಳಿ ಹಾಗೂ 23 ಕಂಚಿನ ಪದಕಗಳ ಸಹಿತ ಒಟ್ಟು 61 ಪದಕಗಳೊಂದಿಗೆ ಒಟ್ಟಾರೆ ಕಾಮನ್‌ವೆಲ್ತ್‌ ಗೇಮ್ಸ್‌ ಪದಕ ಪಟ್ಟಿಯಲ್ಲಿ 4ನೇ ಸ್ಥಾನ ಪಡೆದಿದೆ. ಈ ಮೂಲಕ ಕಾಮನ್‌ವೆಲ್ತ್‌ ಗೇಮ್ಸ್‌ ಇತಿಹಾಸದಲ್ಲಿ ಭಾರತ 5ನೇ ಅತ್ಯುತ್ತಮ ಪ್ರದರ್ಶನ ತೋರಿದೆ. 2010ರಲ್ಲಿ ಭಾರತದಲ್ಲೇ(ಡೆಲ್ಲಿಯಲ್ಲಿ) ನಡೆದ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಭಾರತ 101 ಪದಕಗಳನ್ನು ಗೆದ್ದು ಶ್ರೇಷ್ಠ ಪ್ರದರ್ಶನ ತೋರಿತ್ತು.

Commonwealth Games ಸಾಧಕರಿಗಿಂದು ಪ್ರಧಾನಿ ಮೋದಿ ಔತಣ

ಈ ಬಾರಿಯ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಶೂಟಿಂಗ್‌ ಸ್ಪರ್ಧೆಗೆ ಅವಕಾಶ ನೀಡಿರಲಿಲ್ಲ. ಹೀಗಿದ್ದೂ ಭಾರತ 61 ಪದಕಗಳನ್ನು ಗೆಲ್ಲುವ ಮೂಲಕ ಭರ್ಜರಿ ಪ್ರದರ್ಶನವನ್ನೇ ತೋರಿದೆ. ಯಾಕೆಂದರೇ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಭಾರತೀಯ ಶೂಟರ್‌ಗಳು ಇದುವರೆಗೂ 135 ಪದಕಗಳನ್ನು ಜಯಿಸಿದ್ದರು. ಆದರೆ ಈ ಬಾರಿ ಶೂಟಿಂಗ್‌ಗೆ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಅವಕಾಶವಿರಲಿಲ್ಲ. ಹೀಗಿದ್ದೂ ಭಾರತ ಕಾಮನ್‌ವೆಲ್ತ್‌ ಕೂಟದಲ್ಲಿ ಪದಕ ಗೆಲ್ಲುವ ರೇಸ್‌ನಲ್ಲಿ ಹಿಂದೆ ಬಿದ್ದಿಲ್ಲ. 2018ರ ಗೋಲ್ಡ್‌ಕೋಸ್ಟ್‌ ಕಾಮನ್‌ವೆಲ್ತ್‌ ಗೇಮ್ಸ್‌ ಕ್ರೀಡಾಕೂಟದಲ್ಲಿ 7 ಚಿನ್ನ ಸೇರಿ 16 ಪದಕಗಳನ್ನು ಭಾರತೀಯ ಶೂಟರ್‌ಗಳ ಕೊಳ್ಳೆ ಹೊಡೆದಿದ್ದರು. ಆದರೆ ಕ್ರೀಡಾ ಸೌಲಭ್ಯಗಳ ಕೊರತೆ ಹಿನ್ನೆಲೆಯಲ್ಲಿ ಬರ್ಮಿಂಗ್‌ಹ್ಯಾಮ್‌ ಕಾಮನ್‌ವೆಲ್ತ್‌ನಿಂದ ಶೂಟಿಂಗ್‌ ಹೊರಗಿಡಲಾಗಿತ್ತು. ಇದರ ಹೊರತಾಗಿಯೂ ಭಾರತ ಕುಸ್ತಿ, ವೇಟ್‌ಲಿಫ್ಟಿಂಗ್‌, ಬಾಕ್ಸಿಂಗ್‌ ಹಾಗೂ ಅಥ್ಲೆಟಿಕ್ಸ್‌ನಲ್ಲಿ ಅಭೂತಪೂರ್ವ ಪ್ರದರ್ಶನ ತೋರಿ 60ಕ್ಕೂ ಹೆಚ್ಚು ಪದಕಗಳನ್ನು ಗೆದ್ದಿದೆ.

Follow Us:
Download App:
  • android
  • ios