ಈ ವೇಳೆ ಉತ್ತರ ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನೆ ವತಿಯಿಂದ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು.

ಬಾರಾಮುಲ್ಲಾ (ಕಾಶ್ಮೀರ): ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಸೇನೆಯಲ್ಲಿ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆ ಹೊಂದಿರುವ ಎಂ.ಎಸ್.ಧೋನಿ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕೆಲ ಜನರು ಪಾಕಿಸ್ತಾನ ಹಾಗೂ ಪಾಕ್‌ನ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಪರ ಘೋಷಣೆ ಕೂಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಇತ್ತೀಚೆಗಷ್ಟೇ ಧೋನಿ ಕಾಶ್ಮೀರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಉತ್ತರ ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನೆ ವತಿಯಿಂದ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಆ ಸಂದರ್ಭದಲ್ಲಿ ಕೆಲವರು ಪಾಕಿಸ್ತಾನ ಹಾಗೂ ಅಫ್ರಿದಿ ಪರವಾಗಿ ಘೋಷಣೆ ಕೂಗಿದ್ದು, ಕೊನೆಗೆ ಸೈನಿಕರು ಅವರನ್ನು ನಿಯಂತ್ರಿಸಿದ್ದಾರೆ.