ಮುಂಬೈ(ಜು.30): ಟೀಂ ಇಂಡಿಯಾ ಕೋಚ್ ಹುದ್ದೆಗೆ ಬಿಸಿಸಿಐ ಅರ್ಜಿ ಆಹ್ವಾನಿಸಿದೆ. ಮತ್ತೊಂದೆಡೆ ಹಾಲಿ ಕೋಚ್ ರವಿ ಶಾಸ್ತ್ರಿಯನ್ನೇ ಮುಂದುವರಿಸೋ ಇರಾದೆಯಲ್ಲಿದೆ. ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರ ನಡುವೆ ಸ್ಪರ್ಧೆ ಎರ್ಪಟ್ಟಿದೆ. ಇದೀಗ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅರ್ಜಿ ಸಲ್ಲಿಸಿದ್ದಾರೆ. 

ಇದನ್ನೂ ಓದಿ: ರವಿಶಾಸ್ತ್ರಿ ಬದಲಿಸುವುದೇ ಒಳ್ಳೆಯದು ಎಂದ ರಾಬಿನ್ ಸಿಂಗ್

ಮಾಜಿ ಕ್ರಿಕೆಟಿಗ ಪ್ರವೀಣ್‌ ಆಮ್ರೆ, ಭಾರತ ಕ್ರಿಕೆಟ್‌ ತಂಡದ ಬ್ಯಾಟಿಂಗ್‌ ಕೋಚ್‌ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ಸದ್ಯ ಪ್ರವೀಣ್‌, ಐಪಿಎಲ್‌ನ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಪ್ರತಿಭಾನ್ವೇಷಣೆ ವಿಭಾಗದ ಮುಖ್ಯಸ್ಥರಾಗಿದ್ದಾರೆ. ಪ್ರಧಾನ ಕೋಚ್‌, ಬ್ಯಾಟಿಂಗ್‌, ಬೌಲಿಂಗ್‌ ಹಾಗೂ ಫೀಲ್ಡಿಂಗ್‌ ಕೋಚ್‌ಗಳ ಹುದ್ದೆಗೆ ಅರ್ಜಿ ಸಲ್ಲಿಸಲು ಮಂಗಳವಾರ (ಜು.30) ಕೊನೆ ದಿನವಾಗಿದೆ. ಈಗಾಗಲೇ ಪ್ರಧಾನ ಕೋಚ್‌ ಹುದ್ದೆಗೆ ರಾಬಿನ್‌ ಸಿಂಗ್‌ ಸೇರಿದಂತೆ ಇನ್ನೂ ಕೆಲ ಪ್ರಮುಖರು ಅರ್ಜಿ ಹಾಕಿದ್ದಾರೆ.