ಭಾರತ ಇದುವರೆಗೂ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಗೆದ್ದಿಲ್ಲ. ಜನವರಿ 5 ರಿಂದ ಕೇಪ್'ಟೌನ್'ನಲ್ಲಿ ಆರಂಭವಾಗಲಿರುವ ಮೊದಲ ಟೆಸ್ಟ್'ನಲ್ಲಿ ಇತಿಹಾಸ ಬರೆಯುವ ತವಕದೊಂದಿಗೆ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಕಣಕ್ಕಿಳಿಯಲಿದೆ.

ಜೊಹಾನ್ಸ್'ಬರ್ಗ್(ಡಿ.29): ಭಾರತ ವಿರುದ್ಧ ಜ.5ರಿಂದ ಕೇಪ್'ಟೌನ್‌'ನಲ್ಲಿ ಆರಂಭಗೊಳ್ಳಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್ ಕ್ವಿಂಟನ್ ಡಿ ಕಾಕ್ ಆಡುವುದು ಅನುಮಾನವಾಗಿದೆ.

ಜಿಂಬಾಬ್ವೆ ವಿರುದ್ಧ ಇಲ್ಲಿ ನಡೆದ 4 ದಿನಗಳ ಟೆಸ್ಟ್‌'ನಲ್ಲಿ ಬ್ಯಾಟಿಂಗ್ ಮಾಡುವ ವೇಳೆ ಅವರು ಸ್ನಾಯು ಸೆಳೆತಕ್ಕೆ ಗುರಿಯಾಗಿದ್ದು, ವೈದ್ಯರು ಅವರಿಗೆ ಕೆಲ ದಿನಗಳ ವಿಶ್ರಾಂತಿ ಸೂಚಿಸಿದ್ದಾರೆ ಎನ್ನಲಾಗಿದೆ. ಒಂದೊಮ್ಮೆ ಡಿ ಕಾಕ್ ಅಲಭ್ಯರಾದರೆ, ಡೇನ್ ವಿಲ್ಲಾಸ್‌'ಗೆ ತಂಡದಲ್ಲಿ ಸ್ಥಾನ ಸಿಗುವ ನಿರೀಕ್ಷೆ ಇದೆ. ಇದೇ ವೇಳೆ ನಾಯಕ ಫಾಫ್ ಡು ಪ್ಲೆಸಿಸ್ ಹಾಗೂ ವೇಗಿ ಡೇಲ್ ಸ್ಟೈನ್, ಗಾಯದಿಂದ ಚೇತರಿಸಿಕೊಂಡಿದ್ದು ಮೊದಲ ಟೆಸ್ಟ್ ಆಡಲಿದ್ದಾರೆ ಎನ್ನಲಾಗಿದೆ.

ಇನ್ನು ಭಾರತ ತಂಡದ ಆರಂಭಿಕ ಬ್ಯಾಟ್ಸ್'ಮನ್ ಶಿಖರ್ ಧವನ್ ಕೂಡಾ ಗಾಯಕ್ಕೆ ತುತ್ತಾಗಿದ್ದು, ಅವರ ಸ್ಥಾನದಲ್ಲಿ ಕೆ.ಎಲ್ ರಾಹುಲ್ ಕಣಕ್ಕಿಳಿಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಭಾರತ ಇದುವರೆಗೂ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಗೆದ್ದಿಲ್ಲ. ಜನವರಿ 5 ರಿಂದ ಕೇಪ್'ಟೌನ್'ನಲ್ಲಿ ಆರಂಭವಾಗಲಿರುವ ಮೊದಲ ಟೆಸ್ಟ್'ನಲ್ಲಿ ಇತಿಹಾಸ ಬರೆಯುವ ತವಕದೊಂದಿಗೆ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಕಣಕ್ಕಿಳಿಯಲಿದೆ.