ಫ್ರೆಂಚ್ ಓಪನ್: ಫೈನಲ್ ತಲುಪಿದ ರಾಫೆಲ್ ನಡಾಲ್

Rafael Nadal beats Juan Martin del Potro to reach French Open final
Highlights

ಫ್ರೆಂಚ್ ಓಪನ್ ಟೂರ್ನಿಯಲ್ಲಿ ರಾಫೆಲ್ ನಡಾಲ್ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ಸೆಮಿಫೈನಲ್ ಪಂದ್ಯದಲ್ಲಿ ಜುವಾನ್ ಮಾರ್ಟಿನ್ ಡೆಲ್ ವಿರುದ್ಧ ಗೆಲುವು ಸಾಧಿಸಿದ ನಡಾಲ್, 11ನೇ ಬಾರಿಗೆ ಫ್ರೆಂಚ್ ಓಪನ್ ಫೈನಲ್ ಪ್ರವೇಶಿಸಿದ್ದಾರೆ.

ಪ್ಯಾರಿಸ್(ಜೂನ್.8): ಫ್ರೆಂಚ್ ಓಪನ್ ಟೂರ್ನಿ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಸ್ಪೇನ್‌ನ ರಾಫೆಲ್ ನಡಾಲ್ ಫೈನಲ್ ಪ್ರವೇಶಿಸಿದ್ದಾರೆ. ಸೆಮಿಫೈನಲ್ ಪಂದ್ಯದಲ್ಲಿ ನಡಾಲ್, ಅರ್ಜಂಟೀನಾದ ಜುವಾನ್ ಮಾರ್ಟಿನ್ ಡೆಲ್ ಪೊಟ್ರೋ ವಿರುದ್ಧ 6-4,6-1,6-2 ಅಂತರದಲ್ಲಿ ಗೆಲುವು ಸಾಧಿಸಿದರು. ಈ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ.

27 ಗ್ರ್ಯಾಂಡ್ ಸ್ಲಾಮ್ ಸೆಮಿಫೈನಲ್ ಪಂದ್ಯದಲ್ಲಿ ನಡಾಲ್ 24ರಲ್ಲಿ ಗೆಲವು ಸಾಧಿಸಿದ್ದಾರೆ. ಇದೀಗ 11ನೇ ಬಾರಿ ಫ್ರೆಂಚ್ ಓಪನ್ ಟೂರ್ನಿ ಫೈನಲ್ ಪ್ರವೇಶಿಸೋ ಮೂಲಕ, ಸ್ವಿಟ್ಜರ್‌ಲೆಂಡ್‌ನ ರೋಜರ್ ಫೆಡರರ್ ವಿಂಬಲ್ಡನ್ ದಾಖಲೆ ಸರಿಗಟ್ಟಿದ್ದಾರೆ. ಫೈನಲ್ ಪಂದ್ಯದಲ್ಲಿ ರಾಫೆಲ್ ನಡಲಾ, ಆಸ್ಟ್ರಿಯಾದ ಡೋಮಿನಿಕ್ ಥೀಮ್ ವಿರುದ್ಧ ಪ್ರಶಸ್ತಿಗಾಗಿ ಹೋರಾಟ ನಡೆಸಲಿದ್ದಾರೆ.  
 

loader