ಬಿಎಫ್‌'ಸಿ ತಂಡಕ್ಕೆ ರಾಯಭಾರಿಯಾಗಿರುವುದು ಸಂತಸ ತಂದಿದೆ. ‘ನಾನು ಬೆಂಗಳೂರು ಹುಡುಗ’ ಹೀಗಾಗಿ ನನ್ನನ್ನು ರಾಯಭಾರಿಯನ್ನಾಗಿ ನೇಮಿಸಿದ್ದಾರೆ ಎಂದು ದ್ರಾವಿಡ್ ಹೇಳಿದ್ದಾರೆ.
ಬೆಂಗಳೂರು(ನ.15): ಭಾರತದ ಮಾಜಿ ಕ್ರಿಕೆಟಿಗ ಮತ್ತು ಕಿರಿಯರ ತಂಡದ ಕೋಚ್ ರಾಹುಲ್ ದ್ರಾವಿಡ್ ಅವರನ್ನು ಬೆಂಗಳೂರು ಎಫ್'ಸಿ, ಮುಂಬರುವ ಇಂಡಿಯನ್ ಸೂಪರ್ ಲೀಗ್ (ಐಎಸ್ಎಲ್) ಫುಟ್ಬಾಲ್ ಟೂರ್ನಿಗಾಗಿ ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿದೆ.
ಬಿಎಫ್'ಸಿ ತಂಡಕ್ಕೆ ರಾಯಭಾರಿಯಾಗಿರುವುದು ಸಂತಸ ತಂದಿದೆ. ‘ನಾನು ಬೆಂಗಳೂರು ಹುಡುಗ’ ಹೀಗಾಗಿ ನನ್ನನ್ನು ರಾಯಭಾರಿಯನ್ನಾಗಿ ನೇಮಿಸಿದ್ದಾರೆ ಎಂದು ದ್ರಾವಿಡ್ ಹೇಳಿದ್ದಾರೆ.
‘ಬಿಎಫ್ಸಿ ತಂಡಕ್ಕೆ ಸಿಕ್ಕಿರುವ ಪ್ರತಿಕ್ರಿಯೆ ಅದ್ಭುತವಾಗಿದೆ. ತಂಡ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿದೆ’ ಎಂದು ದ್ರಾವಿಡ್ ಹೇಳಿದ್ದಾರೆ.
ನವೆಂಬರ್ 17ರಿಂದ ಐಎಸ್'ಎಲ್ ಟೂರ್ನಿ ಆರಂಭಗೊಳ್ಳಲಿದ್ದು, 19ರಂದು ತವರಿನಲ್ಲಿ ಬಿಎಫ್'ಸಿ ತನ್ನ ಅಭಿಯಾನ ಆರಂಭಿಸಲಿದೆ.
