ಹಾಕಿ ಇಂಡಿಯಾ ಅಧ್ಯಕ್ಷರಾಗಿ ರಾಜೀಂದರ್ ಸಿಂಗ್ ನೇಮಕ
ರಾಜೀಂದರ್ ಈ ಮೊದಲು ಹಾಕಿ ಇಂಡಿಯಾದ ಖಜಾಂಚಿ ಆಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಜಮ್ಮು ಕಾಶ್ಮೀರ ಹಾಕಿ ಸಂಸ್ಥೆಯ ಖಜಾಂಚಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ನವದೆಹಲಿ(ಮೇ.20]: ಮರಿಯಾಮ್ಮ ಕೋಶಿಸ್ ರಾಜೀನಾಮೆಯಿಂದ ತೆರವಾಗಿದ್ದ ಹಾಕಿ ಇಂಡಿಯಾ ಅಧ್ಯಕ್ಷ ಸ್ಥಾನಕ್ಕೆ ರಾಜೀಂದರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.
ರಾಜೀಂದರ್ ಈ ಮೊದಲು ಹಾಕಿ ಇಂಡಿಯಾದ ಖಜಾಂಚಿ ಆಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಜಮ್ಮು ಕಾಶ್ಮೀರ ಹಾಕಿ ಸಂಸ್ಥೆಯ ಖಜಾಂಚಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
‘ಹಾಕಿ ಇಂಡಿಯಾ ಅಧ್ಯಕ್ಷರನ್ನಾಗಿ ರಾಜೀಂದರ್ ಅವರನ್ನು ಆಯ್ಕೆ ಮಾಡಿದ್ದು ಸಂತಸವನ್ನುಂಟು ಮಾಡಿದೆ. ಮೇ 19ರಿಂದ ಅವರು ಅಧಿಕಾರ ಸ್ವೀಕರಿಸಲಿದ್ದು, ನೂತನ ಹುದ್ದೆಯನ್ನು ಅತ್ಯುತ್ತಮವಾಗಿ ನಿರ್ವಹಿಸಲಿದ್ದಾರೆ’ ಎಂದು ಹಾಕಿ ಇಂಡಿಯಾದ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮುಷ್ತಾಕ್ ಅಹ್ಮದ್ ಶುಭ ಕೋರಿದ್ದಾರೆ.