ರಾಜ್ಯವರ್ಧನ್ ಸಿಂಗ್ ರಾಥೋಡ್ 2004ರ ಅಥೆನ್ಸ್ ಒಲಿಂಪಿಕ್ಸ್'ನಲ್ಲಿ ಶೂಟಿಂಗ್ ಡಬಲ್ ಟ್ರಾಫ್ ವಿಭಾಗದಲ್ಲಿ ಬೆಳ್ಳಿಯ ಪದಕ ಜಯಿಸಿದ್ದರು.

ನವದೆಹಲಿ(ಸೆ.03): ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ರಾಜ್ಯವರ್ಧನ್ ಸಿಂಗ್ ರಾಥೋಡ್ ನೂತನ ಕ್ರೀಡಾ ಸಚಿವರಾಗಿ ನೇಮಕವಾಗಿದ್ದಾರೆ.

ನರೇಂದ್ರ ಮೋದಿ ಸರ್ಕಾರದ ನೂತನ ಸಂಪುಟ ಪುನಾರಚನೆಯಲ್ಲಿ ಕ್ರೀಡಾ ಸಚಿವರಾಗಿ ರಾಥೋಡ್ ಆಯ್ಕೆಯಾಗಿದ್ದಾರೆ. ಈ ಮೂಲಕ ರಾಜ್ಯವರ್ಧನ್ ಸಿಂಗ್ ರಾಥೋಡ್ ಕೇಂದ್ರ ಕ್ರೀಡಾ ಸಚಿವರಾಗಿ ಆಯ್ಕೆಯಾದ ದೇಶದ ಮೊದಲ ಕ್ರೀಡಾಪಟು ಎಂಬ ಖ್ಯಾತಿಗೂ ಅವರು ಭಾಜನರಾಗಿದ್ದಾರೆ.

ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ರಾಥೋಡ್, 'ಪ್ರಧಾನ ಮಂತ್ರಿಗಳು ನನ್ನ ಮೇಲೆ ವಿಶ್ವಾಸವಿಟ್ಟು ಮಹತ್ವದ ಸಚಿವ ಸ್ಥಾನ ನೀಡಿದ್ದರೆ ಅವರಿಗೆ ಆಭಾರಿಯಾಗಿದ್ದೇನೆ. ಕ್ರೀಡಾಪಟುಗಳು ಎದುರಿಸುವ ಎಲ್ಲಾ ತೊಂದರೆಗಳನ್ನು ನಿವಾರಿಸಿ, ಅವರಿಗೆ ಉತ್ತಮ ವಾತಾವರಣ ನಿರ್ಮಿಸಿಕೊಡೋಣ ಎಂದು ಕ್ರೀಡಾ ಪ್ರಾಧಿಕಾರಗಳಿಗೆ' ಮನವಿ ಮಾಡಿದ್ದಾರೆ.

ರಾಜ್ಯವರ್ಧನ್ ಸಿಂಗ್ ರಾಥೋಡ್ 2004ರ ಅಥೆನ್ಸ್ ಒಲಿಂಪಿಕ್ಸ್'ನಲ್ಲಿ ಶೂಟಿಂಗ್ ಡಬಲ್ ಟ್ರಾಫ್ ವಿಭಾಗದಲ್ಲಿ ಬೆಳ್ಳಿಯ ಪದಕ ಜಯಿಸಿದ್ದರು.

ಈ ಮೊದಲು ಕ್ರೀಡಾ ಸಚಿವರಾಗಿ ವಿಜಯ್ ಗೋಯಲ್ ಕಾರ್ಯ ನಿರ್ವಹಿಸುತ್ತಿದ್ದರು.