ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಬ್ಯುಸಿಯಾಗಿರುವ ನಾಯಕ ವಿರಾಟ್ ಕೊಹ್ಲಿ ಈ ಬಾರಿಯ ರಣಜಿ ಟೂರ್ನಿ ಆಡ್ತಾರ? ಈಗಾಗಲೇ ಏಷ್ಯಾಕಪ್ ಟೂರ್ನಿಯಿಂದ ವಿಶ್ರಾಂತಿ ಪಡೆದಿರುವ ಕೊಹ್ಲಿ, ದೆಹಲಿ ಪರ ರಣಜಿ ಟೂರ್ನಿ ಆಡಲಿದ್ದಾರ? ಇಲ್ಲಿದೆ ಉತ್ತರ.

ದೆಹಲಿ(ಸೆ.03): ಸೆಪ್ಟೆಂಬರ್ 15 ರಿಂದ ಆರಂಭಗೊಳ್ಳಲಿರುವ ಏಷ್ಯಾ ಕಪ್ ಟೂರ್ನಿಯಿಂದ ವಿಶ್ರಾಂತಿ ನೀಡಲಾಗಿರುವ ನಾಯಕ ವಿರಾಟ್ ಕೊಹ್ಲಿಗೆ ಇದೀಗ ದೆಹಲಿ ರಣಜಿ ತಂಡದಲ್ಲಿ ಸ್ಥಾನ ನೀಡಲಾಗಿದೆ.

ಮುಂಬರುವ ರಣಜಿ ಟೂರ್ನಿಗೆ ದೆಹಲಿ ಕ್ರಿಕೆಟ್ ಸಂಸ್ಥೆ ಸಂಭವನೀಯ ತಂಡ ಪ್ರಕಟಿಸಿದೆ. ವಿರಾಟ್ ಕೊಹ್ಲಿ, ಶಿಖರ್ ಧವನ್ ಹಾಗೂಲ ಗೌತಮ್ ಗಂಭೀರ್‌ ಸ್ಥಾನ ಪಡೆದಿದ್ದಾರೆ. ಸಂಭವನೀಯ ತಂಡದಲ್ಲಿರುವ ಕ್ರಿಕೆಟಿಗರು ಸೆಪ್ಟೆಂಬರ್ 5 ರಂದು ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳಲು ದೆಹಲಿ ಕ್ರಿಕೆಟ್ ಸಂಸ್ಥೆ ಸೂಚಿಸಿದ್ದಾರೆ.

ಸಂಭವನೀಯ ತಂಡ ಪ್ರಕಟಿಸಿದ ದೆಹಲಿ ಕ್ರಿಕೆಟ್ ಸಂಸ್ಥೆ ನಾಯಕನ ಹೆಸರನ್ನ ಬಹಿರಂಗ ಪಡಿಸಿಲ್ಲ. ಕಳೆದ ಆವೃತ್ತಿಯಲ್ಲಿ ವಿರಾಟ್ ಕೊಹ್ಲಿಗೆ ನಾಯಕ ಪಟ್ಟ ನೀಡಲಾಗಿತ್ತು. ಆದರೆ ಕೊಹ್ಲಿ ಒಂದೇ ಒಂದು ಪಂದ್ಯ ಆಡಿರಲಿಲ್ಲ.

ಸಂಭವನೀಯ ತಂಡದಲ್ಲಿರುವ ವಿರಾಟ್ ಕೊಹ್ಲಿ ಹಾಗೂ ಶಿಖರ್ ಧವನ್ ಈ ಬಾರಿಯೂ ರಣಜಿ ಟೂರ್ನಿಯಿಂದ ಹೊರಗುಳಿಯುವ ಸಾಧ್ಯತೆ ಇದೆ. ಟೀಂ ಇಂಡಿಯಾ ಪರ ಈ ಇಬ್ಬರು ಕ್ರಿಕೆಟಿಗು ಬ್ಯುಸಿಯಾಗಲಿದ್ದಾರೆ. ಆದರೆ ಗೌತಮ್ ಗಂಭೀರ್ ದೆಹಲಿ ಪರ ಕಣಕ್ಕಿಳಿಯಲಿದ್ದಾರೆ.

ಸದ್ಯ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಬ್ಯೂಸಿಯಾಗಿದ್ದಾರೆ. ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಟೀಂ ಇಂಡಿಯಾ ಟೆಸ್ಟ್ ಸರಣಿ ಸೋತಿದೆ. ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿ ಬಳಿಕ ಏಷ್ಯಾ ಕಪ್ ಟೂರ್ನಿ ನಡೆಯಲಿದೆ. ಆದರೆ ಈ ಟೂರ್ನಿಯಿಂದ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.