ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ್ದ ಕರ್ನಾಟಕ ಶ್ರೇಯಸ್ ಗೋಪಾಲ್, ಮನೀಶ್ ಪಾಂಡೆ ಹಾಗೂ ಶ್ರೀನಿವಾಸ್ ಶರತ್ ಅರ್ಧಶತಕಗಳ ನೆರವಿನಿಂದ 275 ರನ್ ಬಾರಿಸಿ ಆಲೌಟ್ ಆಗಿತ್ತು. ಆ ಬಳಿಕ ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಸೌರಾಷ್ಟ್ರ ಎರಡನೇ ದಿನದಂತ್ಯಕ್ಕೆ 7 ವಿಕೆಟ್ ಕಳೆದುಕೊಂಡು 227 ರನ್ ಬಾರಿಸಿತ್ತು.
ಬೆಂಗಳೂರು[ಜ.26]: ರೋನಿತ್ ಮೋರೆ, ಅಭಿಮನ್ಯು ಮಿಥುನ್ ಮಾರಕ ದಾಳಿಗೆ ತತ್ತರಿಸಿದ ಸೌರಾಷ್ಟ್ರ ಮೊದಲ ಇನ್ನಿಂಗ್ಸ್’ನಲ್ಲಿ ಕೇವಲ 236 ರನ್’ಗಳಿಗೆ ಸರ್ವಪತನ ಕಂಡಿದೆ. ಈ ಮೂಲಕ ಕರ್ನಾಟಕ 39 ರನ್’ಗಳ ಅಲ್ಪ ಮುನ್ನಡೆ ಪಡೆದಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ್ದ ಕರ್ನಾಟಕ ಶ್ರೇಯಸ್ ಗೋಪಾಲ್, ಮನೀಶ್ ಪಾಂಡೆ ಹಾಗೂ ಶ್ರೀನಿವಾಸ್ ಶರತ್ ಅರ್ಧಶತಕಗಳ ನೆರವಿನಿಂದ 275 ರನ್ ಬಾರಿಸಿ ಆಲೌಟ್ ಆಗಿತ್ತು. ಆ ಬಳಿಕ ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಸೌರಾಷ್ಟ್ರ ಎರಡನೇ ದಿನದಂತ್ಯಕ್ಕೆ 7 ವಿಕೆಟ್ ಕಳೆದುಕೊಂಡು 227 ರನ್ ಬಾರಿಸಿತ್ತು. ಮೊದಲ ದಿನವೇ ರೋನಿತ್ ಮೋರೆ 5 ವಿಕೆಟ್ ಪಡೆದು ಮಿಂಚಿದ್ದರು. ಮೂರನೇ ದಿನದ ಆರಂಭದಲ್ಲೇ ಮಿಥುನ್ ಸತತ ಎರಡು ಎಸೆತಗಳಲ್ಲಿ 2 ವಿಕೆಟ್ ಪಡೆದು ಕರ್ನಾಟಕ ಮೇಲುಗೈ ಸಾಧಿಸಲು ನೆರವಾದರು. ಸೌರಾಷ್ಟ್ರ ಕೊನೆಯ 49 ಎಸೆತಗಳಲ್ಲಿ ಕೇವಲ 13 ರನ್ ಗಳಿಸಿ 6 ವಿಕೆಟ್ ಕಳೆದುಕೊಂಡಿತು.
ಕರ್ನಾಟಕ ಪರ ರೋನಿತ್ ಮೋರೆ 6 ವಿಕೆಟ್ ಕಬಳಿಸಿದರೆ, ಮಿಥುನ್ 3 ಹಾಗೂ ಶ್ರೇಯಸ್ ಗೋಪಾಲ್ 1 ವಿಕೆಟ್ ಪಡೆದರು. ಇನ್ನು ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಕರ್ನಾಟಕ ಆರ್ ಸಮರ್ಥ್ ವಿಕೆಟ್ ಕಳೆದುಕೊಂಡಿದೆ. ಇದೀಗ ಮಯಾಂಕ್ ಅಗರ್’ವಾಲ್ ಹಾಗೂ ಕೆ. ಸಿದ್ಧಾರ್ಥ್ ಬ್ಯಾಟಿಂಗ್ ನಡೆಸುತ್ತಿದ್ದು 6 ಓವರ್ ಮುಕ್ತಾಯದ ವೇಳೆಗೆ 1 ವಿಕೆಟ್ ಕಳೆದುಕೊಂಡು 14 ರನ್ ಬಾರಿಸಿದ್ದು ಒಟ್ಟಾರೆ 54 ರನ್’ಗಳ ಮುನ್ನಡೆ ಸಾಧಿಸಿದೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Jan 26, 2019, 10:43 AM IST