ವಿದರ್ಭ ಹಾಗೂ ಕೇರಳ ನಡುವಿನ ರಣಜಿ ಸೆಮಿಫೈನಲ್ ಪಂದ್ಯ ಕೇವಲ ಎರಡೇ ದಿನಕ್ಕೆ ಮುಕ್ತಾಯವಾಗಿದೆ. ಉಮೇಶ್ ಯಾದವ್ ದಾಳಿಗೆ ಕುಸಿತ ಕೇರಳ ಹೀನಾಯ ಸೋಲು ಅನುಭವಿಸಿದೆ. ಇಲ್ಲಿದೆ ಪಂದ್ಯದ ಹೈಲೈಟ್ಸ್!
ವಯನಾಡ್(ಜ.25): ಪ್ರಸಕ್ತ ರಣಜಿ ಟೂರ್ನಿಯಲ್ಲಿ ಅದ್ಬುತ ಪ್ರದರ್ಶನ ನೀಡುತ್ತಿರುವ ವಿದರ್ಭ ಮೊದಲ ತಂಡವಾಗಿ ಫೈನಲ್ ಪ್ರವೇಶಿಸಿದೆ. ಕೇರಳ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಇನ್ನಿಂಗ್ಸ್ ಹಾಗೂ 11 ರನ್ ಗೆಲುವು ಸಾಧಿಸಿದ ವಿದರ್ಭ ಸತತ 2ನೇ ಭಾರಿಗೆ ಫೈನಲ್ ಪ್ರವೇಶಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ.
ಇದನ್ನೂ ಓದಿ: 2019ರ ವಿಶ್ವಕಪ್: ಎಂ.ಎಸ್.ಧೋನಿಗೆ 4ನೇ ಕ್ರಮಾಂಕ!
ಇದೇ ಮೊದಲ ಬಾರಿಗೆ ಸೆಮಿಫೈನಲ್ ಪ್ರವೇಶಿಸಿದ ಕೇರಳ ತಂಡಕ್ಕೆ ನಿರಾಸೆಯಾಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಕೇರಳ ಕೇವಲ 106 ರನ್‌ಗಳಿಗೆ ಆಲೌಟ್ ಆಗಿತ್ತು. ಉಮೇಶ್ ಯಾದವ್ 7 ವಿಕೆಟ್ ಕಬಳಿಸೋ ಮೂಲಕ ವಿದರ್ಭಕ್ಕೆ ಭರ್ಜರಿ ಯಶಸ್ಸು ತಂದುಕೊಟ್ಟಿದ್ದರು.
ವಿದರ್ಭ ಮೊದಲ ಇನ್ನಿಂಗ್ಸ್‌ನಲ್ಲಿ 208 ರನ್ ಸಿಡಿಸಿ ಆಲೌಟ್ ಆಗಿತ್ತು. ಫೈಯಜ್ ಫಜಲ್ 75 ರನ್ ಭಾರಿಸಿದರು. ಈ ಮೂಲಕ ವಿದರ್ಭ 102 ರನ್ ಮುನ್ನಡೆ ಪಡೆಯಿತು. ಇನ್ನು ದ್ವಿತೀಯ ಇನ್ನಿಂಗ್ಸ್‌ನಲ್ಲಿ ಕೇರಳ ಚೇತರಿಸಿಕೊಳ್ಳಲು ಅವಕಾಶ ಸಿಗಲಿಲ್ಲ. ಮತ್ತೆ ಉಮೇಶ್ ಯಾದವ್ ದಾಳಿಗೆ ಕುಸಿದ ಕೇರಳ 91 ರನ್‌ಗೆ ಆಲೌಟ್ ಆಯಿತು. ಈ ಮೂಲಕ ವಿದರ್ಭ ಇನ್ನಿಂಗ್ಸ್ ಹಾಗೂ 11 ರನ್ ಗೆಲುವು ಸಾಧಿಸಿತು.
ಇದನ್ನೂ ಓದಿ: ನ್ಯೂಜಿಲೆಂಡ್ ಸರಣಿಗೆ ಪಾಂಡ್ಯ-ಭಾರತ ಎ ತಂಡಕ್ಕೆ ರಾಹುಲ್ ಆಯ್ಕೆ!
ದ್ವಿತೀಯ ಇನ್ನಿಂಗ್ಸ್‌ನಲ್ಲಿ ಉಮೇಶ್ ಯಾದವ್ 5 ವಿಕೆಟ್ ಕಬಳಿಸಿದರು. ಎರಡನೇ ದಿನಕ್ಕೆ ಪಂದ್ಯ ಮುಗಿಸಿದ ವಿದರರ್ಭ ಇದೀಗ ರಣಜಿ ಟ್ರೋಫಿ ಫೈನಲ್ ಪ್ರವೇಶಿಸಿದೆ. ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ನಡೆಯತ್ತಿರುವ ಕರ್ನಾಟಕ ಹಾಗೂ ಸೌರಾಷ್ಟ್ರ ನಡುವಿನ ಸೆಮಿಫೈನಲ್ ಪಂದ್ಯದಲ್ಲಿ ಗೆದ್ದ ತಂಡ, ಫೆಬ್ರವರಿ 3 ರಂದು ವಿದರ್ಭ ವಿರುದ್ದ ಫೈನಲ್ ಪಂದ್ಯ ಆಡಲಿದೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Jan 25, 2019, 2:27 PM IST