ಡೆಹ್ರಾಡೂನ್: ಮೊಹಮದ್ ನಬಿ (81) ಹಾಗೂ ರಶೀದ್ ಖಾನ್ (2-27) ಅದ್ಭುತ ಪ್ರದರ್ಶನದ ನೆರವಿನಿಂದ ಆಫ್ಘಾನಿಸ್ತಾನ, ಐರ್ಲೆಂಡ್ ವಿರುದ್ಧ 3ನೇ ಟಿ20 ಪಂದ್ಯದಲ್ಲಿ 32 ರನ್‌ಗಳ ಗೆಲುವು ಸಾಧಿಸಿತು. ಇದರೊಂದಿಗೆ ಆಫ್ಘನ್ 3-0 ಯಿಂದ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿತು. 

ಮೊದಲು ಬ್ಯಾಟ್ ಮಾಡಿದ ಆಫ್ಘಾನಿಸ್ತಾನ 7 ವಿಕೆಟ್‌ಗೆ 210 ರನ್‌ಗಳಿಸಿತು. ಈ ಬೃಹತ್ ಗುರಿ ಬೆನ್ನತ್ತಿದ ಐರ್ಲೆಂಡ್ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 178 ರನ್ ಗಳಿಸಲಷ್ಟೇ ಶಕ್ತವಾಯಿತು. 

ಈ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ರಶೀದ್ ಅಂತರಾಷ್ಟ್ರೀಯ ಟಿ20ಯಲ್ಲಿ ಹ್ಯಾಟ್ರಿಕ್ ಸಾಧಿಸಿದ ಮೊದಲ ಸ್ಪಿನ್ನರ್ ಎನಿಸಿದರು.

ಸ್ಕೋರ್: 

ಆಫ್ಘಾನಿಸ್ತಾನ 210/7
ಐರ್ಲೆಂಡ್ 178/8