ವರ್ಸಸ್ಟ್'ಶೈರ್ ತಂಡವನ್ನು ಪ್ರತಿನಿಧಿಸುತ್ತಿರುವ ಅಶ್ವಿನ್, ಗ್ಲೌಸಸ್'ಸ್ಟೈರ್ ಎದುರು 8 ವಿಕೆಟ್ ಕಬಳಿಸುವಲ್ಲಿ ಅಶ್ವಿನ್ ಯಶಸ್ವಿಯಾಗಿದ್ದಾರೆ.

ಲಂಡನ್(ಸೆ.01): ಭಾರತದ ಅನುಭವಿ ಆಫ್'ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇದೇ ಮೊದಲ ಬಾರಿಗೆ ಕೌಂಟಿ ಕ್ರಿಕೆಟ್'ಗೆ ಪದಾರ್ಪಣೆ ಮಾಡಿದ್ದು, ಮೊದಲ ಪಂದ್ಯದಲ್ಲೇ ಗಮನಾರ್ಹ ಪ್ರದರ್ಶನ ತೋರುವಲ್ಲಿ ಸಫಲವಾಗಿದ್ದಾರೆ.

ಹೌದು, ವರ್ಸಸ್ಟ್'ಶೈರ್ ತಂಡವನ್ನು ಪ್ರತಿನಿಧಿಸುತ್ತಿರುವ ಅಶ್ವಿನ್, ಗ್ಲೌಸಸ್'ಸ್ಟೈರ್ ಎದುರು 8 ವಿಕೆಟ್ ಕಬಳಿಸುವಲ್ಲಿ ಅಶ್ವಿನ್ ಯಶಸ್ವಿಯಾಗಿದ್ದಾರೆ.

ಮೊದಲ ಇನಿಂಗ್ಸ್'ನಲ್ಲಿ 3 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದ ಅಶ್ವಿನ್, ಎರಡನೇ ಇನಿಂಗ್ಸ್'ನಲ್ಲಿ 68/5 ವಿಕೆಟ್ ಪಡೆದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

Scroll to load tweet…