ಲಂಕಾ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾದ ಜಡೇಜಾ
ಗಾಲೆ(ಜು.29): ಭಾರತದ ಆಲ್‌ರೌಂಡರ್ ರವೀಂದ್ರ ಜಡೇಜಾ ಶ್ರೀಲಂಕಾ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಡ್ರೆಸ್ಸಿಂಗ್ ಕೊಠಡಿಯಲ್ಲಿ ಜಡೇಜಾ, ಶ್ರೀಲಂಕಾದ ಆಫ್ ಸ್ಪಿನ್ನರ್ ದಿಲ್ರುವಾನ್ ಪೆರೇರಾ ಅಥವಾ ಅರೆಕಾಲಿಕ ಸ್ಪಿನ್ನರ್ ಧನುಷ್ಕಾ ಗುಣತಿಲಕ ಅವರ ಬೌಲಿಂಗ್ ಶೈಲಿಯನ್ನು ಅಣಕಿಸಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣವಾದ ಯೂ ಟ್ಯೂಬ್‌ನಲ್ಲಿ ವೈರಲ್ ಆಗಿದೆ. ಇದು ಲಂಕಾ ಅಭಿಮಾನಿಗಳ ಸಿಟ್ಟಿಗೆ ಕಾರಣವಾಗಿದ್ದು, ಜಡೇಜಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಕ್ರಿಕೆಟ್ ಶ್ರೀಲಂಕಾದ ಅಧಿಕಾರಿಗಳು, ‘ಈ ಕುರಿತು ಜಡೇಜಾ ವಿರುದ್ಧ ಯಾವುದೇ ದೂರನ್ನು ದಾಖಲಿಸಿಲ್ಲ. ಆದರೆ, ಮುಂದಿನ ದಿನಗಳಲ್ಲಿ ಇಂತಹ ಘಟನೆ ನಡೆಯದಂತೆ ಅವರು ಎಚ್ಚರಿಕೆ ವಹಿಸುತ್ತಾರೆ ಎನ್ನುವ ನಂಬಿಕೆಯಿದೆ’ ಎಂದಿದ್ದಾರೆ.
